ಹುಬ್ಬಳ್ಳಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಡಿಸೆಂಬರ್ 14 ರ ಇಂದು ಧಾರವಾಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದು, ನಮ್ಮ ಕ್ಲಿನಿಕ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಕಯಾಗಲಿದ್ದಾರೆ.
BIGG NEWS : ಚರ್ಮಗಂಟು ರೋಗ ಪರಿಹಾರಕ್ಕೆ ರಾಜ್ಯ ಸರ್ಕಾರದಿಂದ 30 ಕೋಟಿ ರೂ. ಬಿಡುಗಡೆ : ಸಚಿವ ಪ್ರಭು ಚವ್ಹಾಣ್
ಇಂದು ಬೆಳಿಗ್ಗೆ 10-30 ಗಂಟೆಗೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸುವರು. 11 ಗಂಟೆಗೆ ಹುಬ್ಬಳ್ಳಿ ಭೈರಿದೇವರಕೊಪ್ಪದ ರೇಣುಕಾ ನಗರದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಏರ್ಪಡಿಸಿರುವ ನಮ್ಮ ಕ್ಲಿನಿಕ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 12-30 ಗಂಟೆಗೆ ಹುಬ್ಬಳ್ಳಿ ಭೈರಿದೇವರಕೊಪ್ಪ, ಸಪ್ತಗಿರಿ ಲೇಔಟ್, ವಿದ್ಯಾನಿಕೇತನ ಪಿಯು ವಿಜ್ಞಾನ ಮಹಾವಿದ್ಯಾಲಯಕ್ಕೆ ಭೇಟಿ ನೀಡುವರು. ಮಧ್ಯಾಹ್ನ 1 ಗಂಟೆಗೆ ಡೆನಿಸನ್ಸ್ ಹೊಟೇಲ್ಗೆ ತೆರಳುವರು. ನಂತರ ಮಧ್ಯಾಹ್ನ 1-30 ಗಂಟೆಗೆ ಹುಬ್ಬಳ್ಳಿ ವಿಮಾನದ ಮೂಲಕ ನವದೆಹಲಿಗೆ ತೆರಳುವರು ಎಂದು ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಭೈರಿದೇವರಕೊಪ್ಪದ ರೇಣುಕಾನಗರದಲ್ಲಿ ಮುಖ್ಯಮಂತ್ರಿಗಳು ನಮ್ಮ ಕ್ಲಿನಿಕ್ ಉದ್ಘಾಟಿಸಲಿದ್ದಾರೆ. ಎಲ್ಲ 438 ನಮ್ಮ ಕ್ಲಿನಿಕ್ಗಳನ್ನು ವರ್ಚುವಲ್ ಮೂಲಕ ಏಕಕಾಲಕ್ಕೆ ಚಾಲನೆ ನೀಡಲಿದ್ದಾರೆ. ಆರೋಗ್ಯ ಸಚಿವರಾದ ಡಾ.ಕೆ. ಸುಧಾಕರ, ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲೆಯ ಎಲ್ಲ ಶಾಸಕರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದರು.
BIGG NEWS : ಗಡಿ ಜಿಲ್ಲೆಯ 1500 ಕ್ಕೂ ಹೆಚ್ಚಿನ ಗ್ರಾಮ ಪಂಚಾಯತಿಗಳ ಅಭಿವೃದ್ಧಿ : ಸಿಎಂ ಬೊಮ್ಮಾಯಿ ಘೋಷಣೆ