ಚಿತ್ರದುರ್ಗ : ರಾಜ್ಯದಲ್ಲಿ ಲವ್ ಜಿಹಾದ್ ತಡೆಗೆ ವಿಶೇಷ ಟಾಸ್ಕ್ ಪೋರ್ಸ್ ರಚನೆ ಮಾಡುವಂತೆ ಹಿಂದೂಪರ ಸಂಘಟನೆಗಳು ಮನವಿ ಮಾಡಿದ್ದಾವೆ. ಆದರೆ ಟಾಸ್ಕ್ ಪೋರ್ಸ್ ರಚನೆ ಅಗತ್ಯವಿಲ್ಲ ಎಂದು ಗೃಹ ಸಚಿವ ಅರಗಜ್ಞಾನೇಂದ್ರ ಸ್ಪಷ್ಟನೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಲವ್ ಜಿಹಾದ್ ತಡೆಗೆ ವಿಶೇಷ ಟಾಸ್ಕ್ ಪೋರ್ಸ್ ರಚಿಸುವಂತೆ ಹಿಂದೂಪರ ಸಂಘಟನೆಗಳು ಮನವಿ ಮಾಡಿವೆ. ಮತಾಂತರ ನಿಷೇಧ ಕಾಯ್ದೆಯಲ್ಲೇ ಲವ್ ಜಿಹಾದ್ ತಡೆ ಒಳಗೊಂಡಿದೆ. ಹೀಗಾಗಿ ವಿಶೇಷ ಟಾಸ್ಕ್ ಪೋರ್ಸ್ ರಚನೆ ಅಗತ್ಯವಿಲ್ಲ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿ ಮಾಡಿದ್ದೇವೆ. ಚಿತ್ರದುರ್ಗದಲ್ಲಿ ಹೆಚ್ಚು ಮತಾಂತರ ಆಗುತ್ತಿವೆ ಎಂದು ಹಲವು ಸ್ವಾಮೀಜಿಗಳು ಮಾಹಿತಿ ನೀಡಿವೆ. ಮತಾಂತರ ಬಗ್ಗೆ ದೂರು ಬಂದರೆ ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ ಎಂದರು.