ಚಾಮರಾಜನಗರ: ಕರ್ನಾಟಕ ಹಾಗೂ ಮಹಾರಾಷ್ಟ್ರ ಗಡಿ ವಿವಾದದ ಬಗ್ಗೆ ಸಂಬಂಧ ಪಟ್ಟ ಅಧಿಕಾರಿಗಳ ಜೊತೆ ಚರ್ಚಿಸುವುದಕ್ಕಾಗಿ, ಇಂದು ದೆಹಲಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೆರಳಲಿದ್ದಾರೆ.
BREAKING NEWS: ‘ಅನುಭವʼ ಚಿತ್ರದ ಖ್ಯಾತಿಯ ಸ್ಯಾಂಡಲ್ವುಡ್ ನಟಿ ಅಭಿನಯಗೆ ಎರಡು ವರ್ಷ ಜೈಲು ಶಿಕ್ಷೆ
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಗಡಿ ವಿವಾದ ಸಂಬಂಧ ರಾಜ್ಯದ ತೀರ್ಮಾನವನ್ನು ಪೋನ್ ನಲ್ಲಿ ತಿಳಿಸಲಾಗಿದೆ. ಇದನ್ನು ಸಂಬಂಧಿಸಿದವರಿಗೆ ಖುದ್ದಾಗಿ ತಿಳಿಸುತ್ತೇನೆ. ಮಹಾಜನ್ ವರದಿ ಬಗ್ಗೆ ಈಗ ಮಾತನಾಡುವುದಿಲ್ಲ ಎಂಬುದಾಗಿ ಹೇಳಿದರು.
ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಸಂಬಂಧ ಇಂದು ದೆಹಲಿಯಲ್ಲಿ ಗೃಹ ಸಚಿವ ಅಮಿತಾ ಶಾ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದ್ದು, ಸಿಎಂ ಬಸವರಾಜ ಬೊಮ್ಮಾಯಿ, ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ, ಅಧಿಕಾರಿಗಳು ಭಾಗಿಯಾಗಲಿದ್ದಾರೆ. ಇಂದು ಸಂಜೆ 7 ಗಂಟೆಗೆ ಸಭೆ ನಿಗದಿಯಾಗಿದ್ದು, ಈ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಸಂಜೆ 4 ಗಂಟೆಗೆ ದೆಹಲಿಗೆ ತೆಳಲಿದ್ದಾರೆ. ಅಲ್ಲಿಂದ ನೇರವಾಗಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸಭೆಯಲ್ಲಿ ಉಭಯ ರಾಜ್ಯಗಳ ನಡುವಿನ ಗಡಿಯಲ್ಲಿನ ವಾಸ್ತವ ಪರಿಸ್ಥಿತಿ ಹಾಗೂ ಕಾನೂನು ಸುವ್ಯವಸ್ಥೆ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ.