ರಾಯಚೂರು: ರಾಜ್ಯದಲ್ಲಿ ಮೊದಲ ಝೀಕಾ ವೈರಸ್ ಪತ್ತೆಯಾದ ಬೆನ್ನಲ್ಲೇ ಒಂದೆಡೆ ಮಕ್ಕಳನ್ನು ಚಿಕಿತ್ಸೆಯಾದ್ರೆ ಇನ್ನೊಂದೆಡೆ ಸ್ಯಾಂಪಲ್ಸ್ ಟೆಸ್ಟ್ಗಾಗಿ ಗರ್ಭಿಣಿಯರ ಮುಂದಾಗುತ್ತಿದ್ದು, ಆಸ್ಪತ್ರೆಯಲ್ಲಿ ಜಾಗವಿಲ್ಲದೆ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ.
ರಾಜ್ಯ ಸರ್ಕಾರಕ್ಕೆ ಬಿಗ್ ಶಾಕ್: ಪೆನ್ನಾರ್ ನದಿ ನೀರು ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಆದೇಶ
ಕಳೆದ ವಾರವಷ್ಟೇ ರಾಜ್ಯದಲ್ಲೇ ಮೊದಲ ಬಾರಿಗೆ 5 ವರ್ಷದ ಬಾಲಕಿಗೆ ಝೀಕಾ ವೈರಸ್ ಸೋಂಕು ಇರುವುದು ಟೆಸ್ಟ್ನಲ್ಲಿ ದೃಢವಾಗಿತ್ತು. ಇದರ ಬೆನ್ನಲ್ಲೇ ಆರೋಗ್ಯ ಇಲಾಖೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ
ಗರ್ಭಿಣಿಯರೇ ಹೆಚ್ಚಾಗಿ ಝೀಕಾ ವೈರಸ್ಗೆ ತುತ್ತಾಗುವ ಸಂಭವ ಹಿನ್ನೆಲೆಯಲ್ಲಿ ಸರ್ವೆ ಮತ್ತು ತಪಾಸಣೆ ಕಾರ್ಯವನ್ನು ಮಾಡುತ್ತಿದ್ದು, 57ಕ್ಕೂ ಹೆಚ್ಚು ಗರ್ಭಿಣಿಯರ ಸ್ಯಾಂಪಲ್ಗಳನ್ನು ಸಂಗ್ರಹಿಸಿ ಟೆಸ್ಟ್ಗೆ ಕಳುಹಿಸಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.
ರಾಜ್ಯ ಸರ್ಕಾರಕ್ಕೆ ಬಿಗ್ ಶಾಕ್: ಪೆನ್ನಾರ್ ನದಿ ನೀರು ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಆದೇಶ
ಏನಿದು ಝೀಕಾ ವೈರಸ್?
ಹೆಸರೇ ಹೇಳುವಂತೆ ಇದೊಂದು ವೈರಸ್. ಈಡಿಸ್ ಸೊಳ್ಳೆಯಿಂದ ಹಬ್ಬುತ್ತದೆ. ಸೊಳ್ಳೆಗಳಿಂದ ಹರಡುವ ಕಾಯಿಲೆಗಳು ಆರಂಭದಲ್ಲಿ ಸೌಮ್ಯವಾಗಿದ್ದು, ನಂತರದಲ್ಲಿ ಜೀವ ತೆಗೆಯುವ ಮಾರಕ ರೋಗಗಳ ರೀತಿ ಬದಲಾಗುತ್ತವೆ. ಅದರಂತೆಯೇ ಝೀಕಾ ವೈರಸ್ ಕೂಡ ಹಗಲಿನಲ್ಲಿ ಕಚ್ಚುವ ಈಡಿಸ್ ಸೊಳ್ಳೆಗಳ ಮೂಲಕ ಹರಡುತ್ತದೆ.
ರಾಜ್ಯ ಸರ್ಕಾರಕ್ಕೆ ಬಿಗ್ ಶಾಕ್: ಪೆನ್ನಾರ್ ನದಿ ನೀರು ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಆದೇಶ
ಎಲ್ಲಿ ಮೊದಲು?
1947ರಲ್ಲಿಉಗಾಂಡಾದ ಕೋತಿಯಲ್ಲಿ ಮೊದಲ ಬಾರಿಗೆ ಪತ್ತೆ. ನಂತರ 2007ರಲ್ಲಿ ಮೈಕ್ರೋನೇಷಿಯಾದಲ್ಲಿ ಮೊದಲ ಬಾರಿಗೆ ಸಾಂಕ್ರಾಮಿಕವಾಗಿ ಹರಡಿ ಆತಂಕ ಉಂಟು ಮಾಡಿತ್ತು. 2015ರಲ್ಲಿ ಲ್ಯಾಟಿನ್ ಅಮೆರಿಕದಲ್ಲಿ, ವಿಶೇಷವಾಗಿ ಬ್ರೆಜಿಲ್ನಲ್ಲಿ ಕಾಣಿಸಿಕೊಂಡಿತು.
ರೋಗದ ಲಕ್ಷಣಗಳೇನು?
ಸೌಮ್ಯ ಜ್ವರ, ದದ್ದುಗಳು, ಕಾಂಜಂಕ್ಟಿವಿಟಿಸ್, ಸ್ನಾಯು- ಕೀಲು ನೋವು, ಅಸ್ವಸ್ಥತೆ ಅಥವಾ ತಲೆನೋವು.
ಮುನ್ನೆಚ್ಚರಿಕಾ ಕ್ರಮಗಳು
ಮನೆ ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳಿ. ಸದ್ಯ ಮಳೆ ಇರುವುದರಿಂದ ರಸ್ತೆಯ ಹೊಂಡಗಳಲ್ಲಿನೀರು ನಿಲ್ಲುವುದು ಸಾಮಾನ್ಯ. ಇಂತಹ ಕಡೆ ಸೊಳ್ಳೆಗಳು ಸಂತನೋತ್ಪತ್ತಿ ಹೆಚ್ಚಿಸಿಕೊಂಡು ಮನುಷ್ಯರ ಮೇಲೆ ಹಗಲಿನ ವೇಳೆ ದಾಳಿ ಮಾಡುತ್ತವೆ. ಇವುಗಳಿಂದ ರಕ್ಷಣೆ ಪಡೆದುಕೊಳ್ಳಲು ಬೇಕಾದ ಮುನ್ನೆಚ್ಚರಿಕಾ ಕ್ರಮ ತೆಗೆದುಕೊಳ್ಳಬೇಕು.
ಒಟ್ಟಾರೆಯಾಗಿ ಝೀಕಾ ವೈರಸ್ ಬಗ್ಗೆ ಪತ್ತೆಯಾಗಿದ ಹಿನ್ನೆಲೆ ಮುನ್ನೆಚ್ಚರಿಕೆ ದೃಷ್ಟಿಯಿಂದ ಗರ್ಭಿಣಿ’ಯರು ಹೆಚ್ಚಿನ ಎಚ್ಚರ ವಹಿಸೋದು ಅತ್ಯಗತ್ಯವಾಗಿದೆ.
ರಾಜ್ಯ ಸರ್ಕಾರಕ್ಕೆ ಬಿಗ್ ಶಾಕ್: ಪೆನ್ನಾರ್ ನದಿ ನೀರು ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಆದೇಶ