ಬೆಂಗಳೂರು : ಡಿಸೆಂಬರ್ 19 ರಿಂದ 30 ರವರೆಗೆ ಬೆಳಗಾವಿಯ ಸುವರ್ಣಸೌಧದಲ್ಲಿ ವಿಧಾನಮಂಡಲದ ಚಳಿಗಾಲದ ಅಧಿವೇಶನ ನಡೆಯಲಿದ್ದು, ಈ ಹಿನ್ನೆಲೆ ಕಾಂಗ್ರೆಸ್ ಬೆಳಗಾವಿಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಿಗದಿ ಮಾಡಿದೆ.
ಡಿ. 19 ರ ಸಂಜೆ 7 ಗಂಟೆಗೆ ಬೆಳಗಾವಿಯ ಖಾಸಗಿ ಹೋಟೆಲ್ ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಿಗದಿಯಾಗಿದ್ದು, ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಯಲಿದೆ. ಸಭೆಯಲ್ಲಿ ವಿವಿಧ ಕಾಂಗ್ರೆಸ್ ಶಾಸಕರು, ಮುಖಂಡರು ಭಾಗಿಯಾಗಲಿದ್ದಾರೆ.
ಇನ್ನೂ,ಡಿಸೆಂಬರ್ 19 ರಿಂದ 30 ರವರೆಗೆ ಬೆಳಗಾವಿಯ ಸುವರ್ಣಸೌಧದಲ್ಲಿ ವಿಧಾನಮಂಡಲದ ಚಳಿಗಾಲದ ಅಧಿವೇಶನ ನಡೆಯಲಿದ್ದು, ಹಲವು ಹೊಸ ಮಸೂದೆ ಮಂಡನೆ ಮಾಡಲಾಗುವುದು ಎಂದು ವಿಧಾನಸಭೆ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಈಗಾಗಲೇ ಹೇಳಿದ್ದಾರೆ.
ಶಿವಮೊಗ್ಗ: ಡಿ.15ರ ನಾಳೆ ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
BREAKING NEWS : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ : ದೆಹಲಿಗೆ ತೆರಳಿದ ಸಿಎಂ ಬೊಮ್ಮಾಯಿ