ತುಮಕೂರು : ಕಾರೊಂದು ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ಒಟ್ಟು ನಾಲ್ವರು ಮೃತಪಟ್ಟ ಭೀಕರ ಘಟನೆ ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಜೋಗಿಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ 48 ರಲ್ಲಿನ ಸೇತುವೆಯಿಂದ ಕಾರಿ ಕೆಳಕ್ಕೆ ಬಿದ್ದಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಾಗೂ ಆಸ್ಪತ್ರೆ ಸಾಗಿಸುವಾಗ ಮತ್ತಿಬ್ಬರು ಮೃತಪಟ್ಟಿದ್ದಾರೆ.
ಪರಿಣಾಮ ಕಾರು ಸಂಪೂರ್ಣ ನಜ್ಜು ಗುಜ್ಜಾಗಿದ್ದು, ಚಾಲಕ ಸೇರಿ ಆರು ಮಂದಿ ಪ್ರಯಾಣಿಸುತ್ತಿದ್ದರು. ಅಪಘಾತದಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಕಳ್ಳಂಬೆಳ್ಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ನಡೆದಿದ್ದು, ಮೃತಪಟ್ಟವರೆಲ್ಲರೂ ಬೆಂಗಳೂರು ನಿವಾಸಿಗಳು ಎಂದು ತಿಳಿದು ಬಂದಿದೆ. ಸಿಂಧನೂರಿನಲ್ಲಿ ನಡೆದ ಮದುವೆ ಮುಗಿಸಿ ಬೆಂಗಳೂರಿಗೆ ಬರುತ್ತಿದ್ದಾಗ ಈ ಘಟನೆ ನಡೆದಿದೆ.
ಒಂದೇ ದಿನ ಎರಡು ಅಪಘಾತ
ಒಂದೇ ದಿನ ಎರಡು ಅಪಘಾತ ನಡೆದಿದ್ದು, ಇಂದು ಬೆಳಗ್ಗೆ ಕ್ಯಾಂಟರ್ ಲಾರಿ, ಇಂಡಿಕಾ ಕಾರು ಮುಖಾಮುಖಿ ಡಿಕ್ಕಿಯಾಗಿ ಒಂದೇ ಗ್ರಾಮದ ನಾಲ್ವರು ಸಾವನ್ನಪ್ಪಿರುವ ಘಟನೆ ಗುಬ್ಬಿ ತಾಲ್ಲೂಕಿನ ಕೊಂಡ್ಲಿ ಕ್ರಾಸ್ ಬಳಿ ನಡೆದಿದೆ.
ತುಮಕೂರಿನಿಂದ ಕೆಬಿಕ್ರಾಸ್ ಕಡೆಗೆ ಹೋಗುತ್ತಿದ್ದ ಕ್ಯಾಂಟರ್ ಲಾರಿ, ತುಮಕೂರು ಕಡೆಗೆ ಬರುತ್ತಿದ್ದ ಇಂಡಿಕಾ ಕಾರಿಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಾವನ್ನಪ್ಪಿದವರೆಲ್ಲರು ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ನಡುವನಹಳ್ಳಿ ಗ್ರಾಮದವ ರಾಮಣ್ಣ (58), ನಾರಾಯಣಪ್ಪ (54) ಸಾಗರ್(23) ಮತ್ತು ನಾರಾಯಣಪ್ಪ ಅವರ ಪತ್ನಿ ನಾಗರತ್ನ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಸಿ.ಟಿ ರವಿ ರೌಡಿಶೀಟರ್, ಕ್ರಿಮಿನಲ್ 420 : ಎಂ.ಲಕ್ಷ್ಮಣ್ ವಾಗ್ಧಾಳಿ |M.Lakshman
ಶಿವಮೊಗ್ಗ: ಡಿ.16ರಂದು ‘ಸೊರಬ ತಾಲೂಕಿ’ನ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut