ಮಂಡ್ಯ: ಮುಂದಿನ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಪಕ್ಷ ಬಲವರ್ಧನೆಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಡಿ.16 ರಂದು ಪಟ್ಟಣದಲ್ಲಿ ಜನ ಸಂಕಲ್ಪ ಯಾತ್ರೆ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಅಸಂಖ್ಯಾತ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಮದ್ದೂರು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಎಸ್.ಪಿ.ಸ್ವಾಮಿ ಬುಧವಾರ ಹೇಳಿದರು.
ಮದ್ದೂರು ಪಟ್ಟಣದ ಮಳವಳ್ಳಿ ರಸ್ತೆಯ ನೂತನ ಬಿಜೆಪಿ ಕಛೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ತಾಲೂಕು ಕ್ರೀಡಾಂಗಣದಲ್ಲಿ ನಡೆಯುವ ಸಮಾವೇಶವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ, ಕಂದಾಯ ಸಚಿವ ಆರ್.ಅಶೋಕ್, ಉನ್ನತ ಶಿಕ್ಷಣ ಸಚಿವ ಸಿ.ಎಸ್.ಅಶ್ವಥ್ ನಾರಾಯಣ್, ಕ್ರೀಡಾ ಸಚಿವ ಕೆ.ಸಿ.ನಾರಾಯಣಗೌಡ, ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು, ಬೃಹತ್ ನೀರಾವರಿ ಸಚಿವ ಗೋವಿಂದ ಕಾರಜೋಳ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದರು.
‘ಬೆಳಗಾವಿ ಅಧಿವೇಶನ’ದಲ್ಲಿ ಭಾಗಿಯಾಗುವ ‘ಸರ್ಕಾರಿ ನೌಕರ’ರ ಗಮನಕ್ಕೆ: ‘ಐಡಿ ಕಾರ್ಡ್’ ಧರಿಸುವುದು ಕಡ್ಡಾಯ
ಸಮಾವೇಶಕ್ಕೆ ಆಗಮಿಸುವ ಮುಖ್ಯಮಂತ್ರಿ ಹಾಗೂ ಗಣ್ಯರನ್ನು ಪ್ರವಾಸಿ ಮಂದಿರದ ನಾಲ್ವಡಿ ಕೃಷ್ಣರಾಜ ಒಡೆಯರ್ ವೃತ್ತದಿಂದ ಭವ್ಯ ಮೆರವಣಿಗೆಯಲ್ಲಿ ಕರೆತರಲಾಗುವುದು ಎಂದು ತಿಳಿಸಿದರು.
ಡಿ.16 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪಾಂಡವಪುರದ ಕಾರ್ಯಕ್ರಮದ ನಂತರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಹೆಲಿಕಾಪ್ಟರ್ ಮೂಲಕ ಬೋರಾಪುರದಲ್ಲಿ ನಿರ್ಮಿಸಲಾಗಿರುವ ಹೆಲಿಪ್ಯಾಡ್ ಗೆ ಬಂದಿಳಿಯಲಿದ್ದಾರೆ. ಆನಂತರ ಮಳವಳ್ಳಿ ರಸ್ತೆಯಲ್ಲಿ ನೂತನವಾಗಿ ನಿರ್ಮಿಸಿರುವ ಬಿಜೆಪಿ ಕಛೇರಿಯನ್ನು ಉದ್ಘಾಟಿಸಲಿದ್ದಾರೆ. ಭೋಜನದ ನಂತರ ಮುಖ್ಯಮಂತ್ರಿ ಹಾಗೂ ಸಚಿವರುಗಳನ್ನು ಮೆರವಣಿಗೆ ಮೂಲಕ ಕರೆತರಲು ಸಕಲ ಸಿದ್ಧತೆ ಮಾಡಲಾಗಿದೆ ಎಂದು ಎಸ್.ಪಿ.ಸ್ವಾಮಿ ತಿಳಿಸಿದರು.
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವ ಉದ್ದೇಶದಿಂದ ಜನ ಸಂಕಲ್ಪ ಯಾತ್ರೆ ಹಮ್ಮಿಕೊಳ್ಳಲಾಗಿದೆ. ಈ ಯಾತ್ರೆಯ ಮೂಲಕ ಕ್ಷೇತ್ರದ ಜನರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಏನಾದರೂ ಕೊಡುಗೆ ನೀಡುತ್ತಾರೆ ಎಂಬ ವಿಶ್ವಾಸವಿದೆ ಎಂದು ಬಿಜೆಪಿ ತಾಲ್ಲೂಕು ಅಧ್ಯಕ್ಷ ಪಣ್ಣೆದೊಡ್ಡಿ ರಘು ವಿಶ್ವಾಸ ವ್ಯಕ್ತಪಡಿಸಿದರು.
ಮದ್ದೂರು ಕ್ಷೇತ್ರದಿಂದ ಎಸ್.ಪಿ.ಸ್ವಾಮಿ ಅವರ ಸ್ಪರ್ಧೆ ಖಚಿತವಾಗಿದ್ದು, ಹೈಕಮಾಂಡ್ ಸಹ ಸ್ವಾಮಿ ಅವರನ್ನು ಕಣಕ್ಕಿಳಿಸಲು ತೀರ್ಮಾನಿಸಿದೆ. ಸಮಾವೇಶದಲ್ಲಿ ಸುಮಾರು 35 ಸಾವಿರಕ್ಕೂ ಮೀರಿ ಪಕ್ಷದ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆ ಇದ್ದು, ಎಲ್ಲರಿಗೂ ಊಟದ ವ್ಯವಸ್ಥೆ ಮಾಡಲಾಗಿದೆ ಎಂದರು.
ಗಡಿ ವಿವಾದವನ್ನು ರಸ್ತೆಯಲ್ಲಿ ಪರಿಹಿಸಕೊಳ್ಳಲು ಬರುವುದಿಲ್ಲ – ಕೇಂದ್ರ ಗೃಹಸಚಿವಿ ಅಮಿತ್ ಶಾ
ಸುದ್ದಿಗೊಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಸಿ.ಪಿ.ಉಮೇಶ್ ಮುಖಂಡರಾದ ಮನುಕುಮಾರ್, ಹನುಮಂತೇಗೌಡ, ಡಾಬಾ ಕಿಟ್ಟಿ, ಮಹೇಂದ್ರ, ನಾಗೇಶ್, ಶಿವರಾಜ್, ಕದಲೂರು ಸುರೇಶ್, ಶಂಕರೇಗೌಡ, ಬುಲೆಟ್ ಬಸವರಾಜು, ಮಹೇಶ್, ಮಧು ಕುಮಾರ್, ಹೊನ್ನಲಗೆರೆ ಸ್ವಾಮಿ ಮಹಿಳಾ ಘಟಕದ ಶ್ವೇತಾ, ಪೂರ್ಣಿಮಾ, ಸಿಂಧೂ ಸೇರಿದಂತೆ ಮತ್ತಿತರರು ಇದ್ದರು.
ವರದಿ : ಗಿರೀಶ್ ರಾಜ್, ಮಂಡ್ಯ