ಬೆಂಗಳೂರು : ರಾಜ್ಯದ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ನಡೆಸಿದ ಮೌಲ್ಯಾಂಕನ ಪರೀಕ್ಷೆಯಲ್ಲಿ ಕಡಿಮೆ ಅಂಕ ಗಳಿಸಿದವರಿಗೆ ಪೂರಕ ಪರೀಕ್ಷೆ ನಡೆಸುವ ನಿರ್ಧಾರವನ್ನು ಶಿಕ್ಷಣ ಇಲಾಖೆ ಕೈಬಿಟ್ಟಿದೆ.
ಮೌಲ್ಯಾಂಕನ ಪರೀಕ್ಷೆಯಲ್ಲಿ ಕಡಿಮೆ ಅಂಕ ಗಳಿಸಿದವರಿಗೆ ಜೂನ್ ಮತ್ತು ಜುಲೈನಲ್ಲಿ ಪರಿಹಾರ ಬೋಧನೆ ನಡೆಸಿ ಶಾಲಾ ಹಂತದಲ್ಲೇ 2 ಪೂರಕ ಪರೀಕ್ಷೆಗಳನ್ನು ನಡೆಸುವ ನಿರ್ಧಾರವನ್ನು ಶಿಕ್ಷಣ ಇಲಾಖೆ ಕೈಬಿಟ್ಟಿದೆ. ಜೂನ್ ಮತ್ತು ಜುಲೈನಲ್ಲಿ ಪರಿಹಾರ ಬೋಧನೆ ನಡೆಸಿ ಶಾಲಾ ಹಂತದಲ್ಲೇ 2 ಪೂರಕ ಪರೀಕ್ಷೆಗಳನ್ನು ನಡೆಸಬೇಕೆಂದು ಈ ಮೊದಲು ನಿರ್ಧರಿಸಲಾಗಿತ್ತು. ಆದರೆ ಪರೀಕ್ಷೆ ನಡೆಸದಿರಲು ತೀರ್ಮಾನಿಸಲಾಗಿದ್ದು, ಜೂನ್-ಜುಲೈನಲ್ಲಿ ಪರಿಹಾರ ಬೋಧನೆ ನಡೆಸಿ ಕಲಿಕಾ ಸಾಮರ್ಥ್ಯ ಉತ್ತಮಗೊಳಿಸುವಂತೆ ಶಿಕ್ಷಣ ಇಲಾಖೆ ಸೂಚಿಸಿದೆ.