ಬೆಂಗಳೂರು : ಜಿಲ್ಲಾಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆ ವಿಳಂಬ ಮಾಡುತ್ತಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿ 5 ಲಕ್ಷ ರೂ. ದಂಡ ವಿಧಿಸಿದೆ.
ರಾಜ್ಯ ಸರ್ಕಾರವು ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಕ್ಷೇತ್ರಗಳ ಮರುವಿಂಗಡಣೆ ಮತ್ತು ಮೀಸಲು ನಿಗದಿ ಪ್ರಕ್ರಿಯೆ ಪೂರ್ಣಗೊಳಿಸಲು ಪದೇ ಪದೇ ಕಾಲಾವಕಾಶ ಕೋರುತ್ತಿದೆ. ಆದರೆ ಅರ್ಜಿ ಸಲ್ಲಿಕೆಯಾಗಿ 1 ವರ್ಷ ಕಳೆದಿದ್ದು, ಈವರೆಗೆ 3 ನೇ ಬಾರಿ ಕಾಲಾವಕಾಶ ಕೋರಲಾಗುತ್ತಿದೆ. ಹೀಗಾಗಿ ರಾಜ್ಯ ಸರ್ಕಾರಕ್ಕೆ 5 ಲಕ್ಷ ರೂ. ದಂಡ ವಿಧಿಸಿದೆ.
Good News : ರೈತ ಸಮುದಾಯಕ್ಕೆ ಗುಡ್ ನ್ಯೂಸ್ : ಬೆಂಬಲ ಬೆಲೆ ಯೋಜನೆಯಡಿ ಭತ್ತ, ರಾಗಿ, ಜೋಳ ಖರೀದಿ
ರಾಜ್ಯದಲ್ಲಿ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಕ್ಷೇತ್ರಗಳ ಗಡಿ ನಿರ್ಣಯ ಹಾಗೂ ಮೀಸಲಾತಿ ನಿಗದಿಪಡಿಸುವ ಅಧಿಕಾರವನ್ನು ರಾಜ್ಯ ಚುನಾವಣಾ ಆಯೋದಿಂದ ವಾಪಸ್ ಪಡೆದು ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ರಚಿಸಲು ಸರ್ಕಾರವು ಕರ್ನಾಟಕ ಪಂಚಾಯತ್ ರಾಜ್ ಮತ್ತು ಗ್ರಾಮ ಸ್ವರಾಜ್ ಕಾಯ್ದೆಗೆ ತಿದ್ದುಪಡಿ ತಂದಿತ್ತು. ಇದನ್ನು ಪ್ರಶ್ನಿಸಿ ಚುನಾವಣಾ ಆಯೋಗ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಸಲ್ಲಿಸಿದೆ.