ಬೆಂಗಳೂರು : ರಾಜ್ಯದ 5 ಲಕ್ಷಕ್ಕೂ ಹೆಚ್ಚು ನಿರುದ್ಯೋಗಿ ಯುವಕ-ಯುವತಿಯರಿಗೆ ಉದ್ಯೋಗ ನೀಡಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.
ಕೊಪ್ಪಳದಲ್ಲಿ ಬಿಜೆಪಿ ಕಚೇರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಸುದ್ದಿಗಾರರ ಜೊತೆ ಸಿಎಂ ಮಾತನಾಡಿದ್ದು, ನಮ್ಮ ಸರ್ಕಾರ ಹೇಳಿಕೆಗೆ ಬದ್ದವಾಗಿದೆ, ರಾಜ್ಯದ 5 ಲಕ್ಷಕ್ಕೂ ಹೆಚ್ಚು ನಿರುದ್ಯೋಗಿ ಯುವಕ-ಯುವತಿಯರಿಗೆ ಉದ್ಯೋಗ ನೀಡಲಾಗುತ್ತದೆ, ರಾಜ್ಯದಲ್ಲಿ 8 ಸಾವಿರ ಶಾಲಾ ಕೊಠಡಿ ನಿರ್ಮಾಣ ಮಾಡುತ್ತಿದೆ ಎಂದು ಹೇಳಿದ್ದಾರೆ.
ಅದೇ ರೀತಿ 5 ಲಕ್ಷಕ್ಕೂ ಹೆಚ್ಚು ಯುವಕ ಯುವತಿಯರುಗೆ ಉದ್ಯೋಗ ಕೊಡಿಸುತ್ತೇವೆ ಎಂದು ಸಿಎಂ ಬೊಮ್ಮಾಯಿ ಹೇಳಿದರು. ಅಂಜನಾದ್ರಿ ಬೆಟ್ಟದ ರಸ್ತೆಗಳ ಅಭಿವೃದ್ದಿಗೆ ಸರ್ಕಾರ ಬದ್ದವಾಗಿದೆ. ಈ ಬಗ್ಗೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳುತ್ತದೆ ಎಂದು ಹೇಳಿದ್ದಾರೆ. ಎಸ್.ಸಿ ಎಸ್ ಟಿ ಸಮುದಾಯದ ಅಭಿವೃದ್ದಿಗೆ ನಮ್ಮ ಸರ್ಕಾರ ಬದ್ದವಾಗಿದೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಒಂದೇ ವರ್ಷದಲ್ಲಿ 8000 ಶಾಲಾ ಕೊಠಡಿ ಮತ್ತು 4000 ಹೊಸ ಅಂಗನವಾಡಿಗಳನ್ನು ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇತ್ತೀಚೆಗೆ ಘೋಷಿಸಿದ್ದರು. ಶಾಲೆಗಳಿಗೆ ದೊಡ್ಡ ಪ್ರಮಾಣದ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಈ ಯೋಜನೆಗೆ ನಮ್ಮ ಸರ್ಕಾರ ಪ್ರಾರಂಭಿಸಿದೆ. 8000 ಶಾಲಾ ಕೊಠಡಿಗಳ ನಿರ್ಮಾಣದ ಗುರಿಯಿದ್ದು, ಮುಂದಿನ ಎರಡು ಮೂರು ವರ್ಷಗಳಲ್ಲಿ ಇದೇ ಯೋಜನೆಯನ್ನು ಅನುಷ್ಠಾನಗೊಳಿಸುವ ಮೂಲಕ ರಾಜ್ಯದಲ್ಲಿ ಶಾಲಾ ಕೊಠಡಿಗಳ ಕೊರತೆಯನ್ನು ನೀಗಿಸಿದಂತಾಗುತ್ತದೆ ಎಂದು ಹೇಳಿದ್ದರು. ಇಂದು ಕೂಡ ಕೊಪ್ಪಳದಲ್ಲಿ ಹೇಳಿಕೆಯನ್ನು ಪುನರುಚ್ಚರಿಸಿದ್ದಾರೆ.
BREAKING NEWS : ರಾಜ್ಯದಲ್ಲಿ 8 ಸಾವಿರ ಶಾಲಾ ಕೊಠಡಿ ನಿರ್ಮಾಣ : ಸಿಎಂ ಬೊಮ್ಮಾಯಿ ಘೋಷಣೆ |Basavaraj Bommai
ಬಿಜೆಪಿಗೆ ಬಿಗ್ ಶಾಕ್: ಕಾಂಗ್ರೆಸ್ ಸೇರ್ಪಡೆಯಾದ ಮಾಜಿ ಶಾಸಕ ವಿ.ಎಸ್ ಪಾಟೀಲ್, ಶ್ರೀನಿವಾಸ್ | Karnataka Congress