ಚಾಮರಾಜನಗರ: ಜಿಲ್ಲೆಯಲ್ಲಿ ಹೆತ್ತ ಮಗನೇ ಸುಳ್ಳು ಹೇಳಿ ಆಸ್ತಿ ಬರೆಸಿಕೊಂಡು ಮನೆಯಿಂದ ಹೊರಹಾಕಿದ್ದಾರೆ. ಈ ಪ್ರಕರಣದ ಅರ್ಜಿ ವಿಚಾರಣೆಗೆ ಅನಾರೋಗ್ಯದಿಂದ ಹಾಸಿಗೆ ಹಿಡಿದಿರುವ ತಾಯಿಯನ್ನು ಮಂಚದ ಮೇಲೆ ಮಲಗಿಸಿಕೊಂಡು ಉಪವಿಭಾಗಾಧಿಕಾರಿ ಕೋರ್ಟ್ಗೆ ಕರೆತರಲಾಯಿತು.
ಕಾಂಗ್ರೆಸ್ ಮನೆಗೆ ಬಾಗಿಲು, ಕಿಟಕಿ ಏನೂ ಇಲ್ಲ – ಸಿಎಂ ಬಸವರಾಜ ಬೊಮ್ಮಾಯಿ
ಮುಮ್ತಾಜ್ ಬೇಗಂ ಹಾಸಿಗೆ ಹಿಡಿದ ವೃದ್ಧೆ. ಮುಮ್ತಾಜ್ ಪತಿ ದಿ.ನಿಸಾರ್ ಅಹ್ಮದ್ ಈಕೆಯ ಹೆಸರಿಗೆ ಸರ್ವೆ ನಂ-282ರಲ್ಲಿ ವಿಸ್ತೀರ್ಣ 3.28 ಎಕರೆ ಜಮೀನನ್ನು ಬರೆದ್ದರಂತೆ. ಆದರೆ ಇದನ್ನು ಕೊನೆಯ ಮಗ ಅಬ್ದುಲ್ ರಜಾಕ್ ಹಜ್ ಯಾತ್ರೆಗೆ ಪಾಸ್ಪೋರ್ಟ್ ಮಾಡಿಸಿಕೊಡುತ್ತೇನೆ ಎಂದು ಸುಳ್ಳು ಹೇಳಿ ಅವನ ಹೆಸರಿಗೆ ಬರೆಸಿಕೊಂಡಿದ್ದ ಎಂಬ ಆರೋಪ ಕೇಳಿಬರುತ್ತಿದೆ.
ಈ ಹಿನ್ನೆಲೆಯಲ್ಲಿ ನೊಂದ ವೃದ್ಧೆ ತನ್ನ ಕೊನೆಯ ಮಗ ಸಿ.ಎನ್. ಅಬ್ದುಲ್ ರಜಾಕ್ ವಿರುದ್ಧ ಪಾಲಕರ ಪೋಷಣೆ, ಸಂರಕ್ಷಣೆ ಹಾಗೂ ಹಿರಿಯ ನಾಗರಿಕರ ರಕ್ಷಣೆ ಕಾಯ್ದೆ-2007 ಅಡಿಯಲ್ಲಿ ಅರ್ಜಿ ಸಲ್ಲಿಸಿದ್ದರು.