ಲಂಡನ್: ವಜ್ರದ ವ್ಯಾಪಾರಿ ನೀರವ್ ಮೋದಿ ವಂಚನೆ ಮತ್ತು ಅಕ್ರಮ ಹಣ ವರ್ಗಾವಣೆ ಆರೋಪಗಳನ್ನ ಎದುರಿಸಲು ಭಾರತಕ್ಕೆ ಹಸ್ತಾಂತರಿಸುವುದರ ವಿರುದ್ಧ ಸುಪ್ರೀಂ ಕೋರ್ಟ್’ಗೆ ಮೇಲ್ಮನವಿ ಸಲ್ಲಿಸಲು ಸಲ್ಲಿಸಿದ್ದ ಅರ್ಜಿಯನ್ನ ಲಂಡನ್ ಹೈಕೋರ್ಟ್ ಗುರುವಾರ ತಿರಸ್ಕರಿಸಿದೆ.
ಅದ್ರಂತೆ, ನೀರವ್ ಮೋದಿ ಮನವಿಯನ್ನ ಹೈಕೋರ್ಟ್ ನಿರಾಕರಿಸಿದ್ದು, ಈಗ ನೀರವ್ ಗಡಿಪಾರು ಕುರಿತು ಬ್ರಿಟನ್ ಸುಪ್ರೀಂಕೋರ್ಟ್ ಮೆಟ್ಟಿಲೇರಲು ಸಾಧ್ಯವಿಲ್ಲ.
ಅಂದ್ಹಾಗೆ, ಪಂಜಾಬ್ ನ್ಯಾಷನಲ್ ಬ್ಯಾಂಕಿನಲ್ಲಿ ದೊಡ್ಡ ಪ್ರಮಾಣದ ವಂಚನೆಯಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪ ಬಹಿರಂಗಗೊಳ್ಳುವ ಮೊದಲು 2018 ರಲ್ಲಿ ಭಾರತದಿಂದ ಪಲಾಯನ ಮಾಡಿದ ಆಭರಣ ವ್ಯಾಪಾರಿ, ತನ್ನನ್ನು ಗಡೀಪಾರು ಮಾಡಿದರೆ ಆತ್ಮಹತ್ಯೆ ಮಾಡಿಕೊಳ್ಳುವ ಹೆಚ್ಚಿನ ಅಪಾಯವಿದೆ ಎಂದು ವಾದಿಸಿದ್ದಾನೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ.
ನವೆಂಬರ್ 9ರಂದು ನೀರವ್ ಭಾರತಕ್ಕೆ ಹಸ್ತಾಂತರಿಸಲು ಹೈಕೋರ್ಟ್ ಹಸಿರು ನಿಶಾನೆ ತೋರಿತ್ತು.
BIGG NEWS: ಬೆಳಗಾವಿಯಲ್ಲಿ ಮರಾಠಿ ಭಾಷಿಕ ಪುಂಡರ ಹಾವಳಿ; ವಾಹನದ ಮೇಲೆ ಕಲ್ಲು ತೂರಾಟ