ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಮೊಬೈಲ್ ಗೀಳು ಸಿಕ್ಕಾಪಟ್ಟೆ ಆಗಿದೆ. ವಾಹನ ಚಲಾಯಿಸುವಾಗ ಮೊಬೈಲ್ ಬಳಸದಂತೆ ಪೊಲೀಸರು ಇತ್ತೀಚೆಗೆ ಎಚ್ಚರಿಕೆ ಕೊಟ್ಟಿದ್ದರು. ಇದರ ನಡುವೆ ದೇವಾಲಯಗಳಲ್ಲೂ ಮೊಬೈಲ್ ಬ್ಯಾನ್ ಮಾಡುವ ಮುನ್ಸೂಚನೆ ಕಾಣುತ್ತಿದೆ.
ಇತ್ತೀಚೆಗೆ ತಮಿಳುನಾಡಿನ ದೇವಾಲಯಗಳಲ್ಲಿ ಮೊಬೈಲ್ ಬಳಕೆ ನಿಷೇಧ ಮಾಡಲಾಗಿದೆ. ಇದೀಗ ಕರ್ನಾಟಕದ ದೇವಾಲಯಗಳಲ್ಲೂ ಮೊಬೈಲ್ ಬ್ಯಾನ್ ಮಾಡಬೇಕೆಂದು ಕೂಗು ಕೇಳಿಬಂದಿದೆ. ಅರ್ಚಕರ ಸಂಘವು ಈ ಬಗ್ಗೆ ಮುಜರಾಯಿ ಇಲಾಖೆಗೆ ಪತ್ರ ಬರೆಯಲು ನಿರ್ಧರಿಸಿದೆ ಎನ್ನಲಾಗಿದೆ.
ದೇವಸ್ಥಾನದಲ್ಲಿ ಭಕ್ತರು ಪೂಜೆ, ಪುನಸ್ಕಾರದ ವೇಲೆ ಮೊಬೈಲ್ ಬಳಸುತ್ತಾರೆ. ಅಲ್ಲದೇ ದೇವಾಲಯಗಳಲ್ಲಿ ಯುವಕ ಯುವತಿಯರು ಫೋಟೋ ತೆಗೆದುಕೊಳ್ಳುವುದು, ರೀಲ್ಸ್ ಮಾಡುವ ಕೆಲಸ ಮಾಡುತ್ತಾರೆ, ಅಲ್ಲದೇ ಭಕ್ತರ ಸೋಗಿನಲ್ಲಿ ಬಂದು ದೇವಾಲಯದ ಒಳಾಂಗಣವನ್ನು ಚಿತ್ರೀಕರಣ ಮಾಡುತ್ತಾರೆ. ಇದರಿಂದ ದೇವಾಲಯಗಳಲ್ಲಿ ಭಕ್ತರ ಏಕಾಗ್ರತೆಗೆ ಅಡ್ಡಿಯಾಗುತ್ತಿದೆ. ಆದ್ದರಿಂದ ಸರ್ಕಾರ ದೇವಾಲಯಗಳಲ್ಲೂ ಮೊಬೈಲ್ ಬ್ಯಾನ್ ಮಾಡಬೇಕು ಎಂದು ಮುಜರಾಯಿ ಇಲಾಖೆಗೆ ಪತ್ರ ಬರೆಯಲು ನಿರ್ಧರಿಸಿದೆ ಎನ್ನಲಾಗಿದೆ.
ಶೀಘ್ರವೇ 10 ಜನ ಕಾಂಗ್ರೆಸ್ ಶಾಸಕರು ಬಿಜೆಪಿ ಸೇರ್ಪಡೆ : ಸಚಿವ ಅಶೋಕ್ ಸ್ಪೋಟಕ ಹೇಳಿಕೆ |R.Ashok