ಬೆಂಗಳೂರು : ಕುಕ್ಕರ್ ಸ್ಫೋಟದ ಭಯೋತ್ಪಾದಕ ಪ್ರಕರಣವನ್ನು “ಭಯೋತ್ಪಾದಕ ಕೃತ್ಯ” ಎಂದು ಡಿಜಿಪಿಯವರು ತನಿಖೆಯ ಆಧಾರದಲ್ಲಿ ಘೋಷಿಸಿದರೆ ಡಿಕೆಶಿ ಕೆಂಡಾಮಂಡಲವಾಗಿದ್ದಾರೆ. ಉಗ್ರನನ್ನು ಉಗ್ರ ಎನ್ನದೇ ಡಿಕೆಶಿಯವರ ಹಾಗೆ “ನಮ್ಮ ಬ್ರದರ್ಸ್” ಎನ್ನಬೇಕಿತ್ತೇನು? ದೇಶದ ಭದ್ರತೆಯ ವಿಚಾರದಲ್ಲಿ ಕಾಂಗ್ರೆಸ್ ಉಗ್ರರ ಪರ ನಿಲ್ಲುತ್ತಿದೆ ಎಂದು ಬಿಜೆಪಿ ಸರಣಿ ಟ್ವೀಟ್ ನಲ್ಲಿ ಕಿಡಿಕಾರಿದೆ.
ಸ್ಫೋಟದ ಬಳಿಕ ಎನ್ ಐ ಎ ಪ್ರಕರಣವನ್ನು ತೀವ್ರಗತಿಯಲ್ಲಿ ಪರಿಗಣಿಸಿ ಡಿಕೆಶಿ ‘ಬ್ರದರ್’ನನ್ನು ಬಂಧಿಸಿದ ನಂತರ ಉಗ್ರಗಾಮಿ ಸಂಘಟನೆಗಳು ನೇರವಾಗಿ ಬೆಂಬಲ ಘೋಷಿಸಿದ್ದೂ ಅಲ್ಲದೇ ‘ನಮ್ಮ ಹುಡುಗ ಯಶಸ್ವಿಯಾಗಿದ್ದಾನೆ’ ಎಂದು ಹೇಳಿಕೆ ನೀಡಿತ್ತು. ಹಾಗಾದರದೂ ಉಗ್ರವಾದವಲ್ಲವೇ? ಎಂದು ಟ್ವೀಟ್ ಮಾಡಿದೆ.
ಕಾಂಗ್ರೆಸ್ ಇಷ್ಟು ವರ್ಷ ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗ ಮಾಡಿದ್ದೆಲ್ಲವೂ ಇಂಥದ್ದೇ. ನಿಜವಾದ ಉಗ್ರರನ್ನು ಬಚ್ಚಿಟ್ಟು, ಹಿಂದೂಗಳ ಮೇಲೆಯೇ ಉಗ್ರರು ಎಂದು ಸುಳ್ಳು ಕೇಸ್ ಹಾಕುತ್ತಾ ಕುಳಿತಿದ್ದಕ್ಕೇ ಅಲ್ಲವೇ ಮುಂಬೈ ತಾಜ್ ಮೇಲೆ ಉಗ್ರರ ದಾಳಿಯಾಗಿದ್ದು? ಕಾಶ್ಮೀರ ಕಣಿವೆಯಲ್ಲಿ ಉಗ್ರರ ಅಟ್ಟಹಾಸವಿದ್ದಿದ್ದು? ಎಂದಿದೆ.
ಮಂಗಳೂರು ಕುಕ್ಕರ್ ಸ್ಪೋಟವನ್ನು ಸಮರ್ಥಿಸಿಕೊಳ್ಳುವ ಮೂಲಕ ಕಾಂಗ್ರೆಸ್ ಅಧ್ಯಕ್ಷರು ತಮ್ಮದು ಭಯೋತ್ಪಾದನಾ ಸಮರ್ಥಕರ ಪಕ್ಷ ಎಂದು ಘೋಷಿಸಿಕೊಂಡಿದೆ. ಚುನಾವಣೆ ಸಮೀಪಿಸಿದಾಗ ಭಾವನಾತ್ಮಕ ಸಂಗತಿಗಳ ಹರಡುವಿಕೆ ಎನ್ನುವ ಡಿಕೆಶಿಯವರು, ದೇಶದ ಭದ್ರತೆಗೆ ಕಂಟಕ ತರುವ ಹೇಳಿಕೆ ನೀಡಿದ್ದಾರೆ ಎಂದು ಸರಣಿ ಟ್ವೀಟ್ ನಲ್ಲಿ ಕಿಡಿಕಾರಿದೆ.
ಮಂಗಳೂರು ಕುಕ್ಕರ್ ಸ್ಪೋಟವನ್ನು ಸಮರ್ಥಿಸಿಕೊಳ್ಳುವ ಮೂಲಕ ಕಾಂಗ್ರೆಸ್ ಅಧ್ಯಕ್ಷರು ತಮ್ಮದು ಭಯೋತ್ಪಾದನಾ ಸಮರ್ಥಕರ ಪಕ್ಷ ಎಂದು ಘೋಷಿಸಿಕೊಂಡಿದೆ. ಚುನಾವಣೆ ಸಮೀಪಿಸಿದಾಗ ಭಾವನಾತ್ಮಕ ಸಂಗತಿಗಳ ಹರಡುವಿಕೆ ಎನ್ನುವ ಡಿಕೆಶಿಯವರು, ದೇಶದ ಭದ್ರತೆಗೆ ಕಂಟಕ ತರುವ ಹೇಳಿಕೆ ನೀಡಿದ್ದಾರೆ.#CommunalCongress
5/n— BJP Karnataka (@BJP4Karnataka) December 15, 2022
ಸ್ಫೋಟದ ಬಳಿಕ @NIA_India ಪ್ರಕರಣವನ್ನು ತೀವ್ರಗತಿಯಲ್ಲಿ ಪರಿಗಣಿಸಿ ಡಿಕೆಶಿ ‘ಬ್ರದರ್’ನನ್ನು ಬಂಧಿಸಿದ ನಂತರ ಉಗ್ರಗಾಮಿ ಸಂಘಟನೆಗಳು ನೇರವಾಗಿ ಬೆಂಬಲ ಘೋಷಿಸಿದ್ದೂ ಅಲ್ಲದೇ ‘ನಮ್ಮ ಹುಡುಗ ಯಶಸ್ವಿಯಾಗಿದ್ದಾನೆ’ ಎಂದು ಹೇಳಿಕೆ ನೀಡಿತ್ತು. ಹಾಗಾದರದೂ ಉಗ್ರವಾದವಲ್ಲವೇ?#CommunalCongress
2/n— BJP Karnataka (@BJP4Karnataka) December 15, 2022
ಕುಕ್ಕರ್ ಸ್ಫೋಟದ ಭಯೋತ್ಪಾದಕ ಪ್ರಕರಣವನ್ನು "ಭಯೋತ್ಪಾದಕ ಕೃತ್ಯ" ಎಂದು ಡಿಜಿಪಿಯವರು ತನಿಖೆಯ ಆಧಾರದಲ್ಲಿ ಘೋಷಿಸಿದರೆ @DKShivakumar ಕೆಂಡಾಮಂಡಲವಾಗಿದ್ದಾರೆ.
ಉಗ್ರನನ್ನು ಉಗ್ರ ಎನ್ನದೇ ಡಿಕೆಶಿಯವರ ಹಾಗೆ "ನಮ್ಮ ಬ್ರದರ್ಸ್" ಎನ್ನಬೇಕಿತ್ತೇನು? ದೇಶದ ಭದ್ರತೆಯ ವಿಚಾರದಲ್ಲಿ ಕಾಂಗ್ರೆಸ್ ಉಗ್ರರ ಪರ ನಿಲ್ಲುತ್ತಿದೆ.#CommunalCongress
1/n pic.twitter.com/8d4I6Hbzdi— BJP Karnataka (@BJP4Karnataka) December 15, 2022
BIGG NEWS : ‘ಕೈ’ ಶಾಸಕ ಅನಿಲ್ ಚಿಕ್ಕಮಾದು ಸಹೋದರಿ ‘ರಂಜಿತಾ’ ಅಧಿಕೃತವಾಗಿ ಜೆಡಿಎಸ್ ಸೇರ್ಪಡೆ