ಬೆಂಗಳೂರು: ಅನೈತಿಕ ಮಾರ್ಗದಲ್ಲಿಯಾದರೂ ಬಿಜೆಪಿಗೆ ಅಧಿಕಾರದ ರುಚಿ ತೋರಿಸಿದ್ದು ಬಿಎಸ್ ಯಡಿಯೂರಪ್ಪ ಅವರು, ಆದರೆ ಅದೇ BSYಗೆ ಬಿಜೆಪಿ ಸಲ್ಲಿಸಿದ ಕೊಡುಗೆ – ಜೈಲು, ಕಣ್ಣೀರು, ದ್ರೋಹ! ಅಡ್ವಾಣಿಯಂತಹ ನಾಯಕರನ್ನೇ ಮುಗಿಸಿದ ಬಿಜೆಪಿ BSY ಅವರನ್ನು ಬಿಡುವುದೇ? ಹತ್ತಿದ ಏಣಿಯನ್ನು ಒಡೆಯುವುದು, ತಿಂದ ತಟ್ಟೆಗೆ ಮಣ್ಣು ಹಾಕುವುದು ಬಿಜೆಪಿಯ ಹುಟ್ಟುಗುಣ ಎಂಬುದಾಗಿ ಟ್ವಿಟ್ ನಲ್ಲಿ ಕರ್ನಾಟಕ ಕಾಂಗ್ರೆಸ್, ಬಿಜೆಪಿಯನ್ನು ಕಾಲೆಳೆದಿದೆ.
ಅನೈತಿಕ ಮಾರ್ಗದಲ್ಲಿಯಾದರೂ ಬಿಜೆಪಿಗೆ ಅಧಿಕಾರದ ರುಚಿ ತೋರಿಸಿದ್ದು @BSYBJP ಅವರು,
ಆದರೆ ಅದೇ BSYಗೆ ಬಿಜೆಪಿ ಸಲ್ಲಿಸಿದ ಕೊಡುಗೆ – ಜೈಲು, ಕಣ್ಣೀರು, ದ್ರೋಹ!ಅಡ್ವಾಣಿಯಂತಹ ನಾಯಕರನ್ನೇ ಮುಗಿಸಿದ ಬಿಜೆಪಿ BSY ಅವರನ್ನು ಬಿಡುವುದೇ?
ಹತ್ತಿದ ಏಣಿಯನ್ನು ಒಡೆಯುವುದು, ತಿಂದ ತಟ್ಟೆಗೆ ಮಣ್ಣು ಹಾಕುವುದು ಬಿಜೆಪಿಯ ಹುಟ್ಟುಗುಣ.#BSYmuktaBJP— Karnataka Congress (@INCKarnataka) December 15, 2022
ಈ ಬಗ್ಗೆ ಸರಣಿ ಟ್ವಿಟ್ ಮಾಡಿದ್ದು, ಒಬ್ಬ ಲಿಂಗಾಯತ ನಾಯಕನನ್ನು ಮುಗಿಸಲು ಮತ್ತೊಬ್ಬ ಲಿಂಗಾಯತ ನಾಯಕನನ್ನೇ ಮುಂದೆ ಬಿಡುವುದು ಸಂಘದ ಕುತ್ಸಿತ ಕಾರ್ಯತಂತ್ರ. ಅದರಂತೆಯೇ ಬಿಎಸ್ ಯಡಿಯೂರಪ್ಪ ಅವರನ್ನು ಮೂಲೆಗುಂಪು ಮಾಡುವ ಟಾಸ್ಕ್ನ್ನು RSS ಬಸವರಾಜ ಬೊಮ್ಮಾಯಿ ಅವರ ಹೆಗಲಿಗೇರಿಸಿದೆ. ಕುರ್ಚಿ ಉಳಿಸಿಕೊಳ್ಳಲು ಬೊಮ್ಮಾಯಿಯವರು ಗುರುವಿಗೇ ತಿರುಮಂತ್ರ ಹಾಕುತ್ತಿದ್ದಾರೆ ಎಂದು ಹೇಳಿದೆ.
ಒಬ್ಬ ಲಿಂಗಾಯತ ನಾಯಕನನ್ನು ಮುಗಿಸಲು ಮತ್ತೊಬ್ಬ ಲಿಂಗಾಯತ ನಾಯಕನನ್ನೇ ಮುಂದೆ ಬಿಡುವುದು ಸಂಘದ ಕುತ್ಸಿತ ಕಾರ್ಯತಂತ್ರ.
ಅದರಂತೆಯೇ @BSYBJP ಅವರನ್ನು ಮೂಲೆಗುಂಪು ಮಾಡುವ ಟಾಸ್ಕ್ನ್ನು RSS @BSBommai ಅವರ ಹೆಗಲಿಗೇರಿಸಿದೆ.
ಕುರ್ಚಿ ಉಳಿಸಿಕೊಳ್ಳಲು ಬೊಮ್ಮಾಯಿಯವರು ಗುರುವಿಗೇ ತಿರುಮಂತ್ರ ಹಾಕುತ್ತಿದ್ದಾರೆ.#BSYmuktaBJP
— Karnataka Congress (@INCKarnataka) December 15, 2022
BSY ಕೃಪೆಯಿಂದ ಸಿಎಂ ಹುದ್ದೆಗೇರಿದ ಬಸವರಾಜ ಬೊಮ್ಮಾಯಿ ಅವರು ಈಗ ಗುರುವನ್ನೇ ಮೂಲೆಗೆ ತಳ್ಳಲು “ಮೀರ್ ಸಾದಿಕ್” ಪಾತ್ರ ನಿರ್ವಹಿಸುತ್ತಿದ್ದಾರೆ! ಸಿಎಂ ಸ್ಥಾನ ಗಟ್ಟಿಯಾಗುವವರೆಗೆ ವಾರಕ್ಕೊಮ್ಮೆ ದವಳಗಿರಿಗೆ ಹೋಗಿಬರುತ್ತಿದ್ದವರು ಈಗ ಕೇಶವ ಕೃಪಾಗೆ ಹೋಗ್ತಿದಾರೆ. ಬಿ.ಎಲ್ ಸಂತೋಷ್ ಅವರ #BSYmuktaBJP ಅಭಿಯಾನಕ್ಕೆ ಬೊಮ್ಮಾಯಿಯವರೂ ಕೈಜೋಡಿಸಿದ್ದಾರೆ ಎಂದಿದೆ.
BSY ಕೃಪೆಯಿಂದ ಸಿಎಂ ಹುದ್ದೆಗೇರಿದ @BSBommai ಅವರು ಈಗ ಗುರುವನ್ನೇ ಮೂಲೆಗೆ ತಳ್ಳಲು "ಮೀರ್ ಸಾದಿಕ್" ಪಾತ್ರ ನಿರ್ವಹಿಸುತ್ತಿದ್ದಾರೆ!
ಸಿಎಂ ಸ್ಥಾನ ಗಟ್ಟಿಯಾಗುವವರೆಗೆ ವಾರಕ್ಕೊಮ್ಮೆ ದವಳಗಿರಿಗೆ ಹೋಗಿಬರುತ್ತಿದ್ದವರು ಈಗ ಕೇಶವ ಕೃಪಾಗೆ ಹೋಗ್ತಿದಾರೆ.
ಬಿ.ಎಲ್ ಸಂತೋಷ್ ಅವರ #BSYmuktaBJP ಅಭಿಯಾನಕ್ಕೆ ಬೊಮ್ಮಾಯಿಯವರೂ ಕೈಜೋಡಿಸಿದ್ದಾರೆ.
— Karnataka Congress (@INCKarnataka) December 15, 2022