ಚಿತ್ರದುರ್ಗ: ಮುರುಘಾಮಠಕ್ಕೆ ( Murugha Matt ) ರಾಜ್ಯ ಸರ್ಕಾರದಿಂದ ( Karnataka Government ) ಆಡಳಿತಾಧಿಕಾರಿಯನ್ನು ನೇಮಿಸಿದ್ದನ್ನು ಪ್ರಶ್ನಿಸಿ, ರಿಟ್ ಅರ್ಜಿಯನ್ನು ಸಲ್ಲಿಸಲಾಗಿದೆ. ಅಲ್ಲದೇ ನಿವೃತ್ತ ಐಎಎಸ್ ಅಧಿಕಾರಿ ಪಿ.ಎಸ್ ವಸ್ತ್ರದ್ ನೇಮಕವನ್ನು ರದ್ದುಗೊಳಿಸುವಂತೆ ಕೋರಲಾಗಿದೆ.
ಅಡ್ವಾಣಿಯಂತಹ ನಾಯಕರನ್ನೇ ಮುಗಿಸಿದ ಬಿಜೆಪಿ, BSY ಬಿಡುವುದೇ: ಟ್ವಿಟ್ ಮೂಲಕ ಕಾಲೆಳೆದ ಕಾಂಗ್ರೆಸ್
ಎರಡು ದಿನಗಳ ಹಿಂದೆ ರಾಜ್ಯ ಸರ್ಕಾರದಿಂದ ಮುರುಘಾ ಮಠಕ್ಕೆ ನಿವೃತ್ತ ಐಎಎಸ್ ಅಧಿಕಾರಿ ಪಿ ಎಸ್ ವಸ್ತ್ರದ್ ನೇಮಕ ಮಾಡಲಾಗಿತ್ತು. ಇಂದು ಈ ನೇಮಕ ಪ್ರಶ್ನಿಸಿ ಚಿತ್ರದುರ್ಗದ ಡಿಎಸ್ ಮಲ್ಲಿಕಾರ್ಜುನ ಮತ್ತಿತ್ತರರು ರಿಟ್ ಅರ್ಜಿಯನ್ನು ಸಲ್ಲಿಸಿದ್ದಾರೆ.
ರಿಟ್ ಅರ್ಜಿಯಲ್ಲಿ ನಿವೃತ್ತ ಐಎಎಸ್ ಅಧಿಕಾರಿ ಪಿ.ಎಸ್ ವಸ್ತ್ರದ್ ನೇಮಕ ರದ್ದುಪಡಿಸಬೇಕು. ಈಗಾಗಲೇ ಡಾ.ಶಿವಮೂರ್ತಿ ಮುರುಘಾ ಶರಣರು ಶಿಕ್ಷಣ ಸಂಸ್ಥೆಗಳಿಗೆ ನಿವೃತ್ತ ನ್ಯಾಯಾಧೀಶರಿಗೆ ಜಿಪಿಎ ನೀಡಿದ್ದಾರೆ. ಮಠದ ವ್ಯವಹಾರಗಳಿಗೆ ಬಸವಪ್ರಭು ಸ್ವಾಮೀಜಿಗೆ ಜಿಪಿಎ ನೀಡಲಾಗಿದೆ ಎಂದಿದ್ದಾರೆ.
BIG BREAKING NEWS: ‘ರಾಜ್ಯ ಸರ್ಕಾರ’ದಿಂದ ‘ವನ್ಯಪ್ರಾಣಿ ದಾಳಿ’ಯಿಂದ ಉಂಟಾಗುವ ಹಾನಿಯ ‘ಪರಿಹಾರ ಧನ’ ಹೆಚ್ಚಿಸಿ ಆದೇಶ
ಇನ್ನೂ ಮಠಾಧಿಪತಿ ಜೈಲಿನಲ್ಲಿರುವುದನ್ನು ಕಾರಣವಾಗಿ ಆಡಳಿತಾಧಿಕಾರಿ ನೇಮಿಸುವುದು ಸಕಾರಣವಲ್ಲ. ಹೀಗಾಗಿ ರಾಜ್ಯ ಸರ್ಕಾರ ನೇಮಿಸಿರುವಂತ ಆಡಳಿತಾಧಿಕಾರಿ ನೇಮಕ ರದ್ದುಗೊಳಿಸುವಂತೆ ಕೋರಲಾಗಿದೆ.