ಮಂಡ್ಯ : ನಾಳೆ ಪಾಂಡವಪುರ, ಮದ್ದೂರಿನಲ್ಲಿ ನಡೆಯಲಿರುವ ಬಿಜೆಪಿ ಜನಸಂಕಲ್ಪ ಯಾತ್ರೆಯ ಅಂತಿಮ ಸಿದ್ದತೆಗಳು ನಡೆಯುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜೊತೆಗೆ ಮಾಜಿ ಸಿಎಂ ಯಡಿಯೂರಪ್ಪ ಸೇರಿದಂತೆ ಕೆಲ ಸಂಪುಟ ಸಹೋದ್ಯೋಗಿಗಳು ಕೂಡ ಭಾಗಿಯಾಗಲಿದ್ದು, ಸಿಎಂ ಸ್ವಾಗತಕ್ಕೆ ಸಕ್ಕರೆನಾಡು ಮಂಡ್ಯ ಸಜ್ಜಾಗಿದೆ.
ಜಿಲ್ಲೆಯ ಪಾಂಡವಪುರ ಪಟ್ಟಣದಲ್ಲಿ ನಾಳೆ ಬೆಳಿಗ್ಗೆ 11 ಗಂಟೆಗೆ ನಡೆಯುವ ಜನಸಂಕಲ್ಪ ಯಾತ್ರೆಯಲ್ಲಿ ಪಾಲ್ಗೊಂಡು, ಮಧ್ಯಾಹ್ನ 2 ಗಂಟೆಯ ನಂತರ ಮದ್ದೂರಿನಲ್ಲಿ ಬಿಜೆಪಿ ಜನಸಂಕಲ್ಪ ಯಾತ್ರೆ ನಡೆಯಲಿದೆ. ಸಿಎಂ ಬೊಮ್ಮಾಯಿ ಸೇರಿದಂತೆ ಪಕ್ಷದ ಹಿರಿಯ ನಾಯಕರು ಕೂಡ ಜನಸಂಕಲ್ಪ ಯಾತ್ರೆಯಲ್ಲಿ ಭಾಗಿಯಾಗಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡ್ಯದ ಜನತೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
BIGG NEWS : ಜೆಇಇ (ಮುಖ್ಯ) 2023 ; ಜನವರಿ ‘ಸೆಷನ್’ಗೆ ನೋಂದಣಿ ಆರಂಭ ; ಈ ರೀತಿ ಅರ್ಜಿ ಸಲ್ಲಿಸಿ |JEE (Main) 2023
ಇನ್ನು ಸಕ್ಕರೆನಾಡು ಮಂಡ್ಯಗೆ ಆಗಮಿಸುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ರೈತ ಸಂಘಟನೆಗಳು ಪ್ರತಿಭಟಿಸುವ ಸಂಭವವಿದೆ. ಕಬ್ಬಿಗೆ ಬೆಂಬಲ ಬೆಲೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಹಲವಾರು ದಿನಗಳಿಂದ ಆಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದರು, ಯಾವುದೇ ಪ್ರತಿಫಲ ಸಿಗದ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪ್ರತಿಭಟನೆಯ ಬಿಸಿ ತಟ್ಟಬಹುದು ಎನ್ನಲಾಗಿದೆ.
ವರದಿ : ಗಿರೀಶ್ ರಾಜ್, ಮಂಡ್ಯ