ಬೆಂಗಳೂರು : 65 ವರ್ಷ ವಯೋಮಿತಿ ದಾಟಿರುವ ನ್ಯಾಯಬೆಲೆ ಅಂಗಡಿಗಳ ಪರವಾನಗಿ ರದ್ದುಗೊಳಿಸುವ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಲು ಮುಂದಾಗಿದೆ ಎನ್ನಲಾಗಿದೆ.
BIG NEWS: ʻಬೇರೆ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಪೆಟ್ರೋಲ್ ಬೆಲೆ ಕಡಿಮೆʼ: ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ
ಡಿಜಿಟಲೀಕರಣಕ್ಕಾಗಿ 65 ವರ್ಷ ಮೇಲ್ಪಟ್ಟ ರೇಷನ್ ಅಂಗಡಿ ಮಾಲೀಕರ ಪರವಾನಗಿ ರದ್ದು ಮಾಡುವ ಸಂಬಂಧ ಗಂಭೀರ ಪ್ರಯತ್ನಗಳು ನಡೆಯುತ್ತಿದ್ದು, ಶೀಘ್ರದಲ್ಲೇ ಈ ನಿಯಮ ಜಾರಿಗೆ ಬರಲಿದೆ ಎಂದು ಮೂಲಗಳು ತಿಳಿಸಿವೆ.
ಆಹಾರ ಇಲಾಖೆಯಲ್ಲಿ ಪಡಿತರ ವಿತರಣೆ ಡಿಜಿಟಲೀಕರಣವಾಗಿದ್ದು, ನ್ಯಾಯಬೆಲೆ ಅಂಗಡಿ ಮಾಲೀಕರು ಫಲಾನುಭವಿಗಳ ಬಯೋಮೆಟ್ರಿಕ್ ಪಡೆಯಲು ಲ್ಯಾಪ್ ಟ್ಯಾಪ್ ಬಳಸುವುದು ಕಡ್ಡಾಯ ಮಾಡಲಾಗಿದೆ. ಹೀಗಾಗಿ 60 ವರ್ಷ ವಯಸ್ಸು ದಾಟಿದವರು ಈ ಹೊಸ ವ್ಯವಸ್ಥೆಗೆ ಹೊಂದಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಹೀಗಾಗಿ 65 ವರ್ಷ ಮೀರಿದ ಅಂಗಡಿ ಮಾಲೀಕರ ಪರವಾನಗಿ ರದ್ದು ಪಡಿಸಿ ಅರ್ಹರಿಗೆ ಆದ್ಯತೆ ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.
65 ವರ್ಷ ವಯಸ್ಸು ಮೀರಿದ ನ್ಯಾಯಬೆಲೆ ಅಂಗಡಿ ಮಾಲೀಕರ ಪರವಾನಗಿ ರದ್ದುಪಡಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದ್ದು, ಬೆಳಗಾವಿ ವಿಧಾನಮಂಡಲದ ಅಧಿವೇಶನದ ನಂತರ ಈ ನಿಯಮ ಜಾರಿಗೆ ಬರಲಿದೆ ಎಂದು ಹೇಳಲಾಗುತ್ತಿದೆ.