ಬೆಂಗಳೂರು: ನಗರದಲ್ಲಿ ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.
BIGG NEWS: ಮುರುಘಾಶ್ರೀ ವಿರುದ್ಧ ಪಿತೂರಿ ಪ್ರಕರಣ; ಚಿತ್ರದುರ್ಗಕ್ಕೆ ಬಂಧಿತ ಸೌಭಾಗ್ಯ ಬಸವರಾಜನ್ ಕರೆತಂದ ಪೊಲೀಸರು
2017ರಲ್ಲಿ ಚಿಲುಮೆ ಸಂಸ್ಥೆಗೆ ಅನುಮತಿಯನ್ನು ಕಾಂಗ್ರೆಸ್ ನೀಡಿದೆ ಎಂದು ಕಾಂಗ್ರೆಸ್ ವಿರುದ್ಧ ಸಿಎಂ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಇಂತಹ ಅಕ್ರಮವನ್ನು ನಡೆಸುವ ಪ್ರವೃತ್ತಿ ಕಾಂಗ್ರೆಸ್ ನವರದ್ದು. ವೋಟರ್ ಐಡಿ ಅಕ್ರಮದ ಬಗ್ಗೆ ಈಗಾಗಲೇ ತನಿಖೆ ನಡೆಸುತ್ತಿದ್ದೇವೆ. ಅಲ್ಲದೇ ಅಕ್ರಮದಲ್ಲಿ ಭಾಗಿಯಾದ ಆರೋಪಿಗಳನ್ನು ಬಂಧಿಸಿದ್ದೇವೆ. ಈ ಬಗ್ಗೆ ಚುನಾವಣೆ ಆಯೋಗವೂ ಕೂಡ ತನಿಖೆ ನಡೆಸುತ್ತಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
BIGG NEWS: ಮುರುಘಾಶ್ರೀ ವಿರುದ್ಧ ಪಿತೂರಿ ಪ್ರಕರಣ; ಚಿತ್ರದುರ್ಗಕ್ಕೆ ಬಂಧಿತ ಸೌಭಾಗ್ಯ ಬಸವರಾಜನ್ ಕರೆತಂದ ಪೊಲೀಸರು
ಇನ್ನು ಬೆಂಗಳೂರಿನಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖೆಗೆ ತನಿಖಾಧಿಕಾರಿಯನ್ನು ನೇಮಕ ಮಾಡಲಾಗಿದೆ.ಚುನಾವಣೆ ಆಯೋಗ ತನಿಖಾಧಿಕಾರಿ ನೇಮಕ ಮಾಡಿದ್ದು, ಬೆಂಗಳೂರು ಪ್ರಾದೇಶಿಕ ಆಯುಕ್ತ ಆಮ್ಲಾನ್ ಆದಿತ್ಯ ಬಿಸ್ವಾನ್ ಅವರನ್ನು ನೇಮಕ ಮಾಡಿದೆ.ಇನ್ನು ಬಿಬಿಎಂಪಿ ವ್ಯಾಪ್ತಿಯಲ್ಲಿ ೬ ಲಕ್ಷಕ್ಕೂ ಅಧಿಕ ಮತದಾರರ ಹೆಸರನ್ನೇ ವೋಟರ್ ಲಿಸ್ಟ್ ನಿಂದ ಡಿಲಿಟ್ ಮಾಡಲಾಗಿದೆ ಎಂದು ಕುಮಾರಸ್ವಾಮಿ ಆರೋಪ ಮಾಡಿದ್ದಾರೆ.