ಬೆಂಗಳೂರು : 2018 ರಲ್ಲಿ ನಡೆದ ಗಲಾಟೆ ಪ್ರಕರಣ ಸಂಬಂಧ ಪಾನಿಪುರಿ ಕಿಟ್ಟಿ ವಿರುದ್ಧ ಹೊಸದಾಗಿ ಎಫ್ ಐಆರ್ ದಾಖಲಾಗಿದ್ದು, ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗಲು ನಟ ದುನಿಯಾ ವಿಜಯ್ ಗೆ ಹೈಗ್ರೌಂಡ್ ಠಾಣೆ ಪೊಲೀಸರು ನೋಟಿಸ್ ನೀಡಿದ್ದಾರೆ.
BIGG NEWS: ಡಿಕೆಶಿ ಏನು ಹೇಳಿದ್ದಾರೆ ಗೊತ್ತಿಲ್ಲ; ಅವರೊಂದಿಗೆ ಮಾತನಾಡುತ್ತೇನೆ; ಯು.ಟಿ ಖಾದರ್
ಈ ಸಂಬಂಧವಾಗಿ ನಟ ದುನಿಯಾ ವಿಜಯ್ ಸ್ಪಷ್ಟನೆ ನೀಡಿದ್ದಾರೆ. ಈ ವಾರ ಚಿತ್ರೀಕರಣ ಇರುವುದರಿಂದ ಮುಂದಿನವಾಋ ವಿಚಾರಣೆಗೆ ಬರುವುದಾಗಿ ತಿಳಿಸಿದ್ದಾರೆ . ಭೀಮ ಸೇರಿದಂತೆ ಹಲವು ಸಿನಿಮಾಗಳ ಚಿತ್ರೀಕರಣದಲ್ಲಿ ವಿಜಯ್ ಭಾಗಿಯಾಗಿದ್ದಾರೆ. ಹಾಗಾಗಿ ಮುಂದಿನ ವಾರ ವಿಚಾರಣೆಗೆ ಹಾಜರಾಗುವುದಾಗಿ ಅವರು ತಿಳಿಸಿದ್ದಾರೆ.
BIGG NEWS: ಡಿಕೆಶಿ ಏನು ಹೇಳಿದ್ದಾರೆ ಗೊತ್ತಿಲ್ಲ; ಅವರೊಂದಿಗೆ ಮಾತನಾಡುತ್ತೇನೆ; ಯು.ಟಿ ಖಾದರ್
ಪಾನಿಪುರಿ ಕಿಟ್ಟಿ ಜೊತೆಗಿನ ಗಲಾಟೆಗೆ ಸಂಬಂಧಿಸಿದಂತೆ ಮೊನ್ನೆಯಷ್ಟೇ ಕಿಟ್ಟಿ ಮೇಲೆ ಎಫ್.ಐ.ಆರ್ ದಾಖಲಾಗಿತ್ತು. ಎಫ್.ಐ.ಆರ್ ದಾಖಲಾಗುತ್ತಿದ್ದಂತೆಯೇ ಕಿಟ್ಟಿ ಪೊಲೀಸ್ ಅಧಿಕಾರಿಯ ಮುಂದೆ ಹಾಜರು ಕೂಡ ಆಗಿದ್ದರು. ಇದೀಗ ಅದೇ ಪ್ರಕರಣಕ್ಕೆ ಸಂಬಂಧಪಟ್ಟಂತೆ ದುನಿಯಾ ವಿಜಯ್ ಅವರಿಗೆ ಪೊಲೀಸರು ನೋಟಿಸ್ ನೀಡಿದ್ದರು. ವಿಚಾರಣೆಗೆ ಹಾಜರಾಗುವಂತೆ ಹೈಗ್ರೌಂಡ್ ಪೊಲೀಸರಿಂದ ನೋಟಿಸ್ ನಲ್ಲಿ ತಿಳಿಸಲಾಗಿದೆ.