ಬೆಳಗಾವಿ : ರಾಜ್ಯಕ್ಕೆ ಮತ್ತೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದು, ಜನವರಿ 12 ರಂದು ಎರಡು ದಿನಗಳ ‘ರಾಷ್ಟ್ರೀಯ ಯುವಜನೋತ್ಸವ’ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಬೆಳಗಾವಿಗೆ ಆಗಮಿಸಲಿದ್ದಾರೆ. ಬೆಳಗಾವಿ ಜಿಲ್ಲಾ ಕ್ರೀಡಾಂಗಣದಲ್ಲಿ ಅದ್ದೂರಿಯಾಗಿ ಸಮಾರಂಭಕ್ಕೆ ಭರ್ಜರಿ ಸಿದ್ದತೆ ನಡೆಸಲಾಗುತ್ತಿದೆ
ಕೇಂದ್ರ ಸರ್ಕಾರ ಸ್ವಾಮಿ ವಿವೇಕಾನಂದ ಜನ್ಮದಿನ ಜನವರಿ 12 ಅನ್ನು ರಾಷ್ಟ್ರೀಯ ಯುವ ದಿನವಾಗಿ ಘೋಷಣೆ ಮಾಡಿದೆ. ಈ ಅಂಗವಾಗಿ ಬೆಳಗಾವಿಯಲ್ಲಿ ಕಾರ್ಯಕ್ರಮ ನಡೆಯಲಿದ್ದು, ಅದನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ.
ಬೆಳಗಾವಿಯ ನೆಹರೂ ನಗರದಲ್ಲಿರುವ ಜಿಲ್ಲಾ ಕ್ರೀಡಾಂಗಣದಲ್ಲಿ 2 ದಿನಗಳ ಕಾಲ ರಾಷ್ಟ್ರೀಯ ಯುವಜನೋತ್ಸವ ನಡೆಯಲಿದೆ. ದೇಶದ ವಿವಿಧ ರಾಜ್ಯಗಳಿಂದ ಆಗಮಿಸುವ ಸುಮಾರು 6 ಸಾವಿರಕ್ಕೂ ಹೆಚ್ಚು ಯುವಕ/ ಯುವತಿಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಈ ಕಾರ್ಯಕ್ರಮದ ಅಂಗವಾಗಿ ಪುಸ್ತಕ ಮೇಳವನ್ನು ಸಹ ಸಿಪಿಇಡಿ ಕ್ರೀಡಾಂಗಣ, ಸರ್ದಾರ್ ಹೈಸ್ಕೂಲ್ ಆವರಣದಲ್ಲಿ ಆಯೋಜನೆ ಮಾಡಲಾಗಿದೆ. ನಗರಕ್ಕೆ ಆಗಮಿಸುವ ಗಣ್ಯರಿಗಾಗಿ ವಸತಿ ವ್ಯವಸ್ಥೆ ಮಾಡಲಾಗುತ್ತಿದೆ. ಈ ಬಾರಿ ಕರ್ನಾಟಕದ ಬೆಳಗಾವಿಯಲ್ಲಿ ಈ ಕಾರ್ಯಕ್ರಮ ಆಯೋಜನೆ ಮಾಡಲಾಗುತ್ತಿದ್ದು, ಈ ನಿಟ್ಟಿನಲ್ಲಿ ಜನವರಿ 12 ಕ್ಕೆ ಬೆಳಗಾವಿಗೆ ನರೇಂದ್ರ ಮೋದಿ ಆಗಮಿಸಲಿದ್ದಾರೆ