ನವದೆಹಲಿ : ಅರುಣಾಚಲ ಪ್ರದೇಶದ ವಾಸ್ತವಿಕ ಗಡಿಯುದ್ದಕ್ಕೂ ಉಭಯ ದೇಶಗಳ ಸೈನಿಕರ ನಡುವೆ ಘರ್ಷಣೆ ನಡೆದ ಕೆಲವು ದಿನಗಳ ನಂತರ, ಚೀನಾ ಯುದ್ಧಕ್ಕೆ ಸಿದ್ಧತೆ ನಡೆಸುತ್ತಿದೆ. ಆದ್ರೆ, ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತವು ಅದನ್ನ ಒಪ್ಪಿಕೊಳ್ಳುತ್ತಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, ಚೀನಾ ಒಡ್ಡಿರುವ ಬೆದರಿಕೆಯನ್ನ ಸರ್ಕಾರ ನಿರ್ಕ್ಷ್ಯಿದ್ತಿದೆ ಎಂದು ಆರೋಪಿಸಿದರು. ಇನ್ನು ಚೀನಾ ಯುದ್ಧಕ್ಕೆ ಸಿದ್ಧತೆ ನಡೆಸುತ್ತಿದೆ. ಆದ್ರೆ, ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತವು ಅದನ್ನ ಒಪ್ಪಿಕೊಳ್ಳುತ್ತಿಲ್ಲ ಎಂದರು.
ರಾಹುಲ್ ಗಾಂಧಿ, “ಚೀನಾ ಯುದ್ಧಕ್ಕೆ ಸಿದ್ಧತೆ ನಡೆಸುತ್ತಿದೆಯೇ ಹೊರತು ಅತಿಕ್ರಮಣಕ್ಕಾಗಿ ಅಲ್ಲ. ಅವರ ಆಯುಧಗಳ ಮಾದರಿಯನ್ನ ನೋಡಿ. ಅವರು ಯುದ್ಧಕ್ಕೆ ತಯಾರಿ ನಡೆಸುತ್ತಿದ್ದಾರೆ. ನಮ್ಮ ಸರ್ಕಾರ ಅದನ್ನು ಒಪ್ಪಿಕೊಳ್ಳುತ್ತಿಲ್ಲ. ಭಾರತ ಸರ್ಕಾರವು ಘಟನೆಗಳ ಮೇಲೆ ಕೆಲಸ ಮಾಡುತ್ತಿದೆಯೇ ಹೊರತು ಕಾರ್ಯತಂತ್ರದ ಮೇಲೆ ಅಲ್ಲ” ಎಂದು ಅವರು ಹೇಳಿದರು.
“ಚೀನಾ ನಮ್ಮ ಭೂಮಿಯನ್ನ ವಶಪಡಿಸಿಕೊಂಡಿದೆ. ಅವರು ಸೈನಿಕರನ್ನು ಹೊಡೆಯುತ್ತಿದ್ದಾರೆ. ಚೀನಾದ ಬೆದರಿಕೆ ಸ್ಪಷ್ಟವಾಗಿದ್ದು, ಸರ್ಕಾರವು ಅದನ್ನ ಮರೆಮಾಚುತ್ತಿದೆ, ನಿರ್ಲಕ್ಷಿಸುತ್ತಿದೆ. ಲಡಾಖ್ ಮತ್ತು ಅರುಣಾಚಲದಲ್ಲಿ ಆಕ್ರಮಣಕ್ಕೆ ಚೀನಾ ಸಿದ್ಧತೆ ನಡೆಸುತ್ತಿದೆ. ಮತ್ತು ಭಾರತ ಸರ್ಕಾರ ನಿದ್ರಿಸುತ್ತಿದೆ” ಎಂದು ರಾಹುಲ್ ಗಾಂಧಿ ಹೇಳಿದರು.
HEALTH TIPS: ಸಕ್ಕರೆ ಕಾಯಿಲೆ ಬಂದಿದೆಯಾ ಎಂಬುದನ್ನು ತಿಳಿಯುವುದು ಹೇಗೆ? ಇಲ್ಲಿದೆ ಮಾಹಿತಿ