ಚಿತ್ರದುರ್ಗ: ಮುರುಘಾ ಮಠದ ಶಿವಮೂರ್ತಿ ಶರಣರ ವಿರುದ್ಧ ಪಿತೂರಿ ಪ್ರಕರಣ ಸಂಬಂಧ ಮಾಜಿ ಶಾಸಕರೂ ಆಗಿರುವ ಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ.ಬಸವರಾಜನ್ ಅವರ ಪತ್ನಿ ಸೌಭಾಗ್ಯ ಬಸವರಾಜನ್ ನನ್ನು ಪೊಲೀಸರು ಬಂಧಿಸಿ ಕೋರ್ಟ್ ಗೆ ಹಾಜರುಪಡಿಸಿದ್ದರು.
ಪ್ರಕರಣ ಸಂಬಂಧ ಇಂದು ವಿಚಾರಣೆ ನಡೆಸಿದ ಕೋರ್ಟ್ ಸೌಭಾಗ್ಯ ಬಸವರಾಜನ್ ನ ನ್ನು ಒಂದು ದಿನ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.
ಪೊಲೀಸರು 5 ದಿನ ಕಸ್ಟಡಿಗೆ ಕೇಳಿದ್ದರು. ಆದರೆ ಚಿತ್ರದುರ್ಗದ 1 ನೇ ಜೆಎಂಸಿ ಕೋರ್ಟ್ 1 ದಿನದ ಮಟ್ಟಿಗೆ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ. ಹಾಗೂ ನಾಳೆ ಸಂಜೆ 5:45 ರ ವೇಳೆಗೆ ಕೋರ್ಟ್ ಗೆ ಹಾಜರುಪಡಿಸುವಂತೆ ಸೂಚನೆ ನೀಡಿದೆ.
ಸೌಭಾಗ್ಯ ಮಠದ ಆಡಳಿತಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆಯಾಗಿದ್ದಾರೆ. ಇರನ್ನು ಗುರುವಾರ ಪೊಲೀಸರು ವಶಕ್ಕೆ ಪಡೆದು ಮಹಿಳಾ ಸಾಂತ್ವನ ಕೇಂದ್ರದಲ್ಲಿ ಇಟ್ಟಿದ್ದರು.ನವೆಂಬರ್ 9 ರಂದು ಮುರುಘಾ ಶ್ರೀ ವಿರುದ್ಧ ಸುಳ್ಳು ದೂರು ದಾಖಲಿಸಲು ಪಿತೂರಿ ನಡೆದಿದೆ ಎಂದು ಮಠದ ಉಸ್ತುವಾರಿ ಬಸವಪ್ರಭು ಶ್ರೀ ಅವರು ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.ನವೆಂಬರ್ 10 ರಂದು ಬಸವರಾಜೇಂದ್ರ ಬಂಧಿಸಿ ಪೊಲೀಸರ ವಿಚಾರಣೆ ನಡೆಸಿ ಹಲವು ಮಾಹಿತಿ ಪಡೆದಿದ್ದರು. ಮಠದ ಮಾಜಿ ಆಡಳಿತಾಧಿಕಾರಿ, ಮಾಜಿ ಆಡಳಿತಾಧಿಕಾರಿ, ಮಾಜಿ ಶಾಸಕ ಬಸವರಾಜನ್ ಬಂಧನ ಆಗಿತ್ತು. ಇದೀಗ ಬಂಧನವಾಗಿರುವ ಸೌಭಾಗ್ಯ ಬಸವರಾಜನ್ ಅವರನ್ನು ಕೂಡ ತೀವ್ರ ವಿಚಾರಣೆ ಒಳಪಡಿಸುವ ಸಾಧ್ಯತೆಗಳಿವೆ.
ಮೈಸೂರು ಸಕ್ಕರೆ ಕಾರ್ಖಾನೆಯಿಂದ ಕಬ್ಬು ಬೆಳಗಾರರಿಗೆ 21 ಕೋಟಿ ರೂ ಪಾವತಿ – ಸಿಎಂ ಬೊಮ್ಮಾಯಿ