ಚಿತ್ರದುರ್ಗ: ಮುರುಘಾಮಠಕ್ಕೆ ( Murugha Matt ) ರಾಜ್ಯ ಸರ್ಕಾರದಿಂದ ( Karnataka Government ) ಆಡಳಿತಾಧಿಕಾರಿಯನ್ನು ನೇಮಿಸಿದ್ದನ್ನು ಪ್ರಶ್ನಿಸಿ, ರಿಟ್ ಅರ್ಜಿಯನ್ನು ಸಲ್ಲಿಸಲಾಗಿದೆ. ಅಲ್ಲದೇ ನಿವೃತ್ತ ಐಎಎಸ್ ಅಧಿಕಾರಿ ಪಿ.ಎಸ್ ವಸ್ತ್ರದ್ ನೇಮಕವನ್ನು ರದ್ದುಗೊಳಿಸುವಂತೆ ಕೋರಲಾಗಿತ್ತು.
ಇದೀಗ ಚಿತ್ರದುರ್ಗದ ಮುರುಘಾಮಠಕ್ಕೆ ಆಡಳಿತಾಧಿಕಾರಿ ನೇಮಕ ಪ್ರಶ್ನಿಸಿ ರಿಟ್ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ತೀರ್ಪು ಕಾಯ್ದಿರಿಸಿ ಆದೇಶ ಹೊರಡಿಸಿದೆ.
ಹೈಕೋರ್ಟ್ ನಲ್ಲಿ ಇಂದು ರಿಟ್ ಅರ್ಜಿ ವಿಚಾರಣೆ ನಡೆದಿದ್ದು, ವಿರಕ್ತ ಮಠದ ಸ್ವಾಮೀಜಿ ಅವಿರಕ್ತ ಚಟುವಟಿಕೆ ನಡೆಸಬಹುದೇ..? ವಿರಕ್ತ ಎಂದರೇನು..? ಎಂದು ಹೈಕೋರ್ಟ್ ಪ್ರಶ್ನೆ ಮಾಡಿದೆ. ಇಂತಹ ಘಟನೆ ನಡೆದಾಗ ಮಠದ ನಿರ್ವಹಣೆ ಹೇಗೆ ಎಂದು ಅರ್ಜಿದಾರರಿಗೆ ಹೈಕೋರ್ಟ್ ಪ್ರಶ್ನೆ ಮಾಡಿದೆ.
ಇದಕ್ಕೆ ಅರ್ಜಿದಾರರ ಪರ ವಕೀಲರು ಪ್ರತಿಕ್ರಿಯೆ ನೀಡಿದ್ದು, ಅರಿಷಡ್ವರ್ಗಗಳನ್ನು ಬಿಟ್ಟವನೇ ವಿರಕ್ತ, ವೈಯಕ್ತಿಕ ಬಿಟ್ಟು ಸಮಾಜದ ಕಲ್ಯಾಣದಲ್ಲಿ ಆಸಕ್ತಿ ಹೊಂದಿದವರು. ಅನ್ನದಾಸೋಹದ ಜೊತೆ ಜ್ಞಾನ ದಾಸೋಹ ನಡೆಸಲಾಗುತ್ತದೆ ಎಂದು ಹೈಕೋರ್ಟ್ ಗೆ ಅರ್ಜಿದಾರರ ಪರ ವಕೀಲರು ಮಾಹಿತಿ ನೀಡಿದ್ದಾರೆ.
ಎರಡು ದಿನಗಳ ಹಿಂದೆ ರಾಜ್ಯ ಸರ್ಕಾರದಿಂದ ಮುರುಘಾ ಮಠಕ್ಕೆ ನಿವೃತ್ತ ಐಎಎಸ್ ಅಧಿಕಾರಿ ಪಿ ಎಸ್ ವಸ್ತ್ರದ್ ನೇಮಕ ಮಾಡಲಾಗಿತ್ತು. ಈ ನೇಮಕ ಪ್ರಶ್ನಿಸಿ ಚಿತ್ರದುರ್ಗದ ಡಿಎಸ್ ಮಲ್ಲಿಕಾರ್ಜುನ ಮತ್ತಿತ್ತರರು ರಿಟ್ ಅರ್ಜಿಯನ್ನು ಸಲ್ಲಿಸಿದ್ದಾರೆ. ರಿಟ್ ಅರ್ಜಿಯಲ್ಲಿ ನಿವೃತ್ತ ಐಎಎಸ್ ಅಧಿಕಾರಿ ಪಿ.ಎಸ್ ವಸ್ತ್ರದ್ ನೇಮಕ ರದ್ದುಪಡಿಸಬೇಕು. ಈಗಾಗಲೇ ಡಾ.ಶಿವಮೂರ್ತಿ ಮುರುಘಾ ಶರಣರು ಶಿಕ್ಷಣ ಸಂಸ್ಥೆಗಳಿಗೆ ನಿವೃತ್ತ ನ್ಯಾಯಾಧೀಶರಿಗೆ ಜಿಪಿಎ ನೀಡಿದ್ದಾರೆ. ಮಠದ ವ್ಯವಹಾರಗಳಿಗೆ ಬಸವಪ್ರಭು ಸ್ವಾಮೀಜಿಗೆ ಜಿಪಿಎ ನೀಡಲಾಗಿದೆ ಎಂದಿದ್ದಾರೆ.ಇನ್ನೂ ಮಠಾಧಿಪತಿ ಜೈಲಿನಲ್ಲಿರುವುದನ್ನು ಕಾರಣವಾಗಿ ಆಡಳಿತಾಧಿಕಾರಿ ನೇಮಿಸುವುದು ಸಕಾರಣವಲ್ಲ. ಹೀಗಾಗಿ ರಾಜ್ಯ ಸರ್ಕಾರ ನೇಮಿಸಿರುವಂತ ಆಡಳಿತಾಧಿಕಾರಿ ನೇಮಕ ರದ್ದುಗೊಳಿಸುವಂತೆ ಕೋರಿದ್ದರು.
Good News : ಕೇಂದ್ರ ಸರ್ಕಾರ ಮಹತ್ವದ ಯೋಜನೆಗೆ ಚಾಲನೆ, ಈಗ ‘LPG ಸಿಲಿಂಡರ್’ ರೀಫಿಲ್ ಮಾಡಲು ‘ಬಡ್ಡಿ ರಹಿತ ಸಾಲ’ ಲಭ್ಯ
BREAKING NEWS: ಮುರುಘಾ ಶ್ರೀ ವಿರುದ್ಧ ಪಿತೂರಿ ಕೇಸ್: ‘ಸೌಭಾಗ್ಯ ಬಸವರಾಜನ್’ಗೆ 1 ದಿನ ಪೊಲೀಸ್ ಕಸ್ಟಡಿಗೆ