ಚಿಕ್ಕಬಳ್ಳಾಪುರ : ಶೀಘ್ರದಲ್ಲೇ ಚಿಕ್ಕಬಳ್ಳಾಪುರ ವಿಧಾನ ಸಭಾ ಕ್ಷೇತ್ರದ 22 ಸಾವಿರ ವಸತಿ ರಹಿತ ಕುಟುಂಬಗಳಿಗೆ ಉಚಿತವಾಗಿ ನಿವೇಶನಗಳನ್ನು ವಿತರಿಸಲಾಗುತ್ತದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಘೋಷಿಸಿದರು.
ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಶೀಘ್ರದಲ್ಲೇ ಚಿಕ್ಕಬಳ್ಳಾಪುರ ವಿಧಾನ ಸಭಾ ಕ್ಷೇತ್ರದ 22 ಸಾವಿರ ವಸತಿ ರಹಿತ ಕುಟುಂಬಗಳಿಗೆ ಉಚಿತವಾಗಿ ನಿವೇಶನಗಳನ್ನು ವಿತರಿಸಲಾಗುತ್ತದೆ, ಇದು ದಾಖಲೆ ಬರೆಯಲಿದೆ ಎಂದು ಹೇಳಿದರು.
ಚಿಕ್ಕಬಳ್ಳಾಪುರದ ಕುಪ್ಪಹಳ್ಳಿ ಗ್ರಾಮದಲ್ಲಿ ಆದರ್ಶ ಗ್ರಾಮ ಯೋಜನೆಯಡಿ ₹40 ಲಕ್ಷ ವೆಚ್ಚದಲ್ಲಿ ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಭೂಮಿಪೂಜೆ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿದರು. ಆದರ್ಶ ಗ್ರಾಮ ಯೋಜನೆಯಡಿ ಆಯ್ಕೆಯಾದ ಗ್ರಾಮಗಳ ಮೂಲಭೂತ ಸೌಕರ್ಯವನ್ನು ಅಭಿವೃದ್ಧಿ ಪಡಿಸಿ ಆದರ್ಶ ಗ್ರಾಮಗಳಾಗಿಸುವ ಉದ್ದೇಶವನ್ನು ಹೊಂದಲಾಗಿದೆ ಎಂದು ಸುಧಾಕರ್ ಹೇಳಿದ್ದಾರೆ.
ಉಚಿತ ಆರೋಗ್ಯ ಸೇವೆ ನೀಡುವ ‘ಶಾಂತಾ ಮೊಬೈಲ್ ಕ್ಲಿನಿಕ್’ಗೆ ಸಚಿವ ಸುಧಾಕರ್ ಚಾಲನೆ ನೀಡಿದರು.ಮನೆ ಮನೆಗೂ ಉಚಿತ ಆರೋಗ್ಯ ಸೇವೆ ನೀಡುವ ಮತ್ತೊಂದು ‘ಶಾಂತಾ ಮೊಬೈಲ್ ಕ್ಲಿನಿಕ್’ಗೆ ಇಂದು ಚಿಕ್ಕಬಳ್ಳಾಪುರದ ನಂದಿಯಲ್ಲೂ ಚಾಲನೆ ನೀಡಲಾಯಿತು. ಈಗಾಗಲೇ ಮಂಚೇನಹಳ್ಳಿ ತಾಲ್ಲೂಕು, ಮಂಡಿಕಲ್ ಹೋಬಳಿಯಲ್ಲಿ ಒಂದೊಂದು ಕ್ಲಿನಿಕ್ ಕಾರ್ಯ ನಿರ್ವಹಿಸುತ್ತಿದ್ದು, ಈಗ ನಂದಿ ಹೋಬಳಿಯಲ್ಲಿ ಮೂರನೇ ಶಾಂತಾ ಮೊಬೈಲ್ ಕ್ಲಿನಿಕ್ ಉದ್ಘಾಟನೆಗೊಂಡಿದೆ.
ಮೊಬೈಲ್ ಕ್ಲಿನಿಕ್ ನಲ್ಲಿ ನುರಿತ MBBS ವೈದ್ಯರು, ನರ್ಸ್ ಹಾಗೂ ಲ್ಯಾಬ್ ಟೆಕ್ನಿಶಿಯನ್ ಇದ್ದು, ತಪಾಸಣೆ, ಚಿಕಿತ್ಸೆ ಹಾಗೂ ಔಷಧಿಗಳು ಉಚಿತವಾಗಿ ದೊರೆಯುತ್ತವೆ. ಈ ಉಚಿತ ಆರೋಗ್ಯ ಸೇವೆಯ ಪ್ರಯೋಜನ ಪಡೆದುಕೊಂಡು ಉತ್ತಮ ಆರೋಗ್ಯ ತಮ್ಮದಾಗಿಸಿಕೊಳ್ಳಬೇಕೆಂದು ಸಾರ್ವಜನಿಕರಲ್ಲಿ ನಾನು ಕಳಕಳಿಯ ಮನವಿ ಮಾಡುತ್ತೇನೆ ಎಂದು ಸುಧಾಕರ್ ಹೇಳಿದ್ದಾರೆ.ಹಾಗೆಯೇ ಸಚಿವರು ಇಂದು ಚಿಕ್ಕಬಳ್ಳಾಪುರದ ಭೈರನಾಯಕನಹಳ್ಳಿ ಗ್ರಾಮದಲ್ಲಿ ಎತ್ತಿನಹೊಳೆ ಯೋಜನೆಯಡಿ ಅಂದಾಜು ₹31 ಲಕ್ಷ ವೆಚ್ಚದಲ್ಲಿ ನಂದಿ-ಚಿಕ್ಕಬಳ್ಳಾಪುರ ಮುಖ್ಯ ರಸ್ತೆಯಿಂದ ಭೈರನಾಯಕನಹಳ್ಳಿ ಗ್ರಾಮದವರೆಗೆ ನಿರ್ಮಿಸುತ್ತಿರುವ ರಸ್ತೆ ಅಭಿವೃದ್ಧಿ ಕಾಮಗಾರಿಯ ಭೂಮಿಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
GOOD NEWS : ಉಚಿತ ಆರೋಗ್ಯ ಸೇವೆ ನೀಡುವ ‘ಶಾಂತಾ ಮೊಬೈಲ್ ಕ್ಲಿನಿಕ್’ಗೆ ಸಚಿವ ಸುಧಾಕರ್ ಚಾಲನೆ