ಮಡಿಕೇರಿ : ಸರ್ಕಾರಿ ಜಮೀನುಗಳಲ್ಲಿ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸಲು ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ಕಲಂ 94ಎ(4)ಗೆ ತಿದ್ದುಪಡಿ ಮಾಡಿದ ತರುವಾಯ ನಮೂನೆ-57 ರಲ್ಲಿ ಅರ್ಜಿ ಸಲ್ಲಿಸಲು ಕಾಲಾವಕಾಶ ಕಲ್ಪಿಸಲಾಗಿದೆ.
BIGG NEWS: ಬೆಳಗಾವಿಯಲ್ಲಿ ಡಿ. 19ರಿಂದ ಚಳಿಗಾಲ ಅಧಿವೇಶನ; ಸುವರ್ಣ ಸೌಧ ಸುತ್ತಮುತ್ತ ನಿಷೇಧಾಜ್ಞೆ ಜಾರಿ
ಸರ್ಕಾರಿ ಜಮೀನುಗಳಲ್ಲಿ ಅನಧಿಕೃತ ಸಾಗುವಳಿ ಮಾಡಿಕೊಂಡಿರುವ ರೈತರು ಮತ್ತು ಸಣ್ಣ ರೈತರ ಹಿತದೃಷ್ಟಿಯಿಂದ ಅಂತಹ ಜಮೀನುಗಳನ್ನು ಸಕ್ರಮಗೊಳಿಸುವ ಉದ್ದೇಶದಿಂದ ಹಾಗೂ ಸಕ್ರಮೀಕರಣಕ್ಕಾಗಿ ಬಹಳಷ್ಟು ಅನಧಿಕೃತ ಸಾಗುವಳಿದಾರರು ತಿಳುವಳಿಕೆಯ ಕೊರತೆಯಿಂದ ಅರ್ಜಿ ಸಲ್ಲಿಸದೆ ಇರುವವರಿಗೆ ಮತ್ತೊಂದು ಅವಕಾಶವನ್ನು ನೀಡುವ ಹಿತದೃಷ್ಟಿಯಿಂದ ನಮೂನೆ-57 ರಲ್ಲಿ ಅರ್ಜಿ ಸಲ್ಲಿಸಲು 2023 ರ ಮೇ, 30 ರ ವರೆಗೆ ಕಾಲಾವಕಾಶ ವಿಸ್ತರಿಸಲಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ ಅವರು ತಿಳಿಸಿದ್ದಾರೆ.
BIGG NEWS: ಬೆಳಗಾವಿಯಲ್ಲಿ ಡಿ. 19ರಿಂದ ಚಳಿಗಾಲ ಅಧಿವೇಶನ; ಸುವರ್ಣ ಸೌಧ ಸುತ್ತಮುತ್ತ ನಿಷೇಧಾಜ್ಞೆ ಜಾರಿ