ಬೆಳಗಾವಿ : ಬೆಳಗಾವಿಯ ಸುವರ್ಣಸೌಧದಲ್ಲಿ ಡಿಸೆಂಬರ್ 19ರಿಂದ ಡಿ.30ರವರೆಗೆ 10ನೇ ಚಳಿಗಾಲದ ಅಧಿವೇಶನ ನಡೆಯಲಿದ್ದು ಈ ನಿಟ್ಟಿನಲ್ಲಿ ಸಕಲ ಸಿದ್ಧತೆಗಳನ್ನು ಮಾಡಲಾಗುತ್ತಿದೆ. ಅಧಿವೇಶನ ಹಿನ್ನೆಲೆ ಡಿ.30ರವರೆಗೆ ಸುವರ್ಣಸೌಧದ 1 ಕಿ.ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ
ಸುದ್ದಿಗಾರರೊಂದಿಗೆ ಮಾತನಾಡಿದ ಬೆಳಗಾವಿ ನಗರ ಪೊಲೀಸ್ ಆಯುಕ್ತ ಡಾ.ಬೋರಲಿಂಗಯ್ಯ , ಡಿ.30ರವರೆಗೆ ಸುವರ್ಣಸೌಧದ 1 ಕಿ.ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಆದೇಶ ಹೊರಡಿಸಿದ್ದಾರೆ. ಬೆಳಗಾವಿ ಸುವರ್ಣಸೌಧದ ಸುತ್ತಮುತ್ತ ಪ್ರತಿಭಟನೆ, ಗುಂಪು ಕಟ್ಟಿಕೊಂಡು ಓಡಾಡಲು ನಿಷೇಧ ಹೇರಲಾಗಿದೆ
ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಇಡೀ ಸರ್ಕಾರವೇ ಬೆಳಗಾವಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಇನ್ನೂ ನಗರದಾದ್ಯಂತ ರಸ್ತೆಗಳಿಗೆ ಕಾಮಗಾರಿ ಮಾಡಲಾಗುತ್ತಿದೆ.ಅಧಿವೇಶನ ಸಂದರ್ಭದ ಬೆಳಗಾವಿ ನಗರಕ್ಕೆ 10 ಸಾವಿರ ಮಂದಿ ಆಗಮಿಸುತ್ತಿರುವ ಹಿನ್ನೆಲೆ ನಗರದ ಬಹುತೇಕ ಲಾಡ್ಜ್ಗಳು ಸಂಪೂರ್ಣ ಭರ್ತಿಯಾಗಿವೆ. ಸಿಎಂ ಬಸವರಾಜ ಬೊಮ್ಮಯಿ ಸೇರಿದಂತೆ ಶಾಸಕರು, ಪರಿಷತ್ ಸದಸ್ಯರು, ಅಧಿಕಾರಿಗಳ ಅಧಿವೇಶನದಲ್ಲಿ ಭಾಗಿಯಾಗಲಿದ್ದಾರೆ