ನವದೆಹಲಿ: ಪತ್ನಿಯೊಂದಿಗೆ ತೀವ್ರ ವಾಗ್ವಾದಕ್ಕಿಳಿದ ವ್ಯಕ್ತಿಯೊಬ್ಬ ತನ್ನ ಎರಡು ವರ್ಷದ ಮಗನನ್ನು ಮೂರು ಅಂತಸ್ತಿನ ಮನೆಯ ಬಾಲ್ಕನಿಯಿಂದ ಎಸೆದು ನಂತರ ಜಿಗಿದ ಘಟನೆ ದೆಹಲಿಯಲ್ಲಿ ನಡೆದಿದೆ.
ಗಾಯಗೊಂಡಿರುವ ತಂದೆ ಮತ್ತು ಮಗ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ.ನಿನ್ನೆ ರಾತ್ರಿ ನವದೆಹಲಿಯ ಕಲ್ಕಾಜಿಯಿಂದ ಈ ಘಟನೆ ವರದಿಯಾಗಿದೆ.
Delhi | A 30-year-old Man Singh allegedly jumped from the third floor after throwing his 2-year-old son from the first floor of a building in Kalkaji. Both, the accused father and son are admitted to a hospital for treatment: Delhi Police
— ANI (@ANI) December 17, 2022
ಮಾನ್ ಸಿಂಗ್ ಮತ್ತು ಅವರ ಪತ್ನಿ ಪೂಜಾ ಕಳೆದ ಕೆಲವು ತಿಂಗಳುಗಳಿಂದ ಜಗಳವಾಡುತ್ತಿದ್ದರು. ಪೂಜಾ ತನ್ನಿಬ್ಬರು ಮಕ್ಕಳೊಂದಿಗೆ ಕಲ್ಕಾಜಿಯಲ್ಲಿರುವ ಅಜ್ಜಿಯ ಮನೆಯಲ್ಲಿ ವಾಸಿಸುತ್ತಿದ್ದಳು.
ನಿನ್ನೆ ರಾತ್ರಿ ಅವರನ್ನು ಭೇಟಿಯಾಗಲು ಮಾನ್ ಸಿಂಗ್ ಬಂದಿದ್ದರು. ಕೋಪದ ಭರದಲ್ಲಿ, ವ್ಯಕ್ತಿ ತನ್ನ ಮಗನನ್ನು ಬಾಲ್ಕನಿಯಿಂದ ಎಸೆದು ನಂತರ ಜಿಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.