ನವದೆಹಲಿ:ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್ ಅವರ ನಕಲಿ ಪಾಸ್ಪೋರ್ಟ್ ಅನ್ನು ಉತ್ತರ ಪ್ರದೇಶ ಪೊಲೀಸರು ವಶಪಡಿಸಿಕೊಂಡಿದ್ದಾರೆ. ನೋಯ್ಡಾದಲ್ಲಿ ಮೂವರು ವಿದೇಶಿಯರಿಂದ ನಟಿ ಐಶ್ವರ್ಯಾ ರೈ ಬಚ್ಚನ್ ನಕಲಿ ಪಾಸ್ಪೋರ್ಟ್ ಅನ್ನು ಉತ್ತರ ಪ್ರದೇಶ ಪೊಲೀಸರು ವಶಪಡಿಸಿಕೊಂಡಿದ್ದಾರೆ ಅಂತ ತಿಳಿಸಿದ್ದಾರೆ.
ಗ್ರೇಟರ್ ನೋಯ್ಡಾ ಮೂಲದ ಮೂವರು ವಿದೇಶಿಯರನ್ನು ಉತ್ತರ ಪ್ರದೇಶ ಪೊಲೀಸರು ಸೈಬರ್ ವಂಚನೆಯಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ಬಂಧಿಸಿದ್ದಾರೆ.
“ಗ್ರೇಟರ್ ನೋಯ್ಡಾದಲ್ಲಿ ನೆಲೆಸಿರುವ ಮೂವರು ವಿದೇಶಿಗರನ್ನು ಸೈಬರ್ ವಂಚನೆಯಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ ಮತ್ತು ಅವರ ಬಳಿ ಚಲನಚಿತ್ರ ತಾರೆ ಐಶ್ವರ್ಯಾ ರೈ ಬಚ್ಚನ್ ಅವರ ಹೆಸರಿನಲ್ಲಿ ನಕಲಿ ಪಾಸ್ಪೋರ್ಟ್ ಹೊಂದಿರುವುದು ಕಂಡುಬಂದಿದೆ” ಎಂದು ಡೆಪ್ಯುಟಿ ಕಮಿಷನರ್ ಆಫ್ ಪೊಲೀಸ್ (ಗ್ರೇಟರ್ ನೋಯ್ಡಾ) ಅಭಿಷೇಕ್ ವರ್ಮಾ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಸದ್ಯಕ್ಕೆ ಪ್ರಕರಣದ ತನಿಖೆ ನಡೆಯುತ್ತಿದೆ. ಸದ್ಯಕ್ಕೆ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಲ್ಲಿ ಇಬ್ಬರು ನೈಜೀರಿಯಾ ಮೂಲದವರು ಮತ್ತು ಒಬ್ಬರು ಘಾನಾ ಮೂಲದವರಾಗಿದ್ದಾರೆ ಅಂತ ಅವರು ಇದೇ ವೇಳೆ ತಿಳಿಸಿದ್ದಾರೆ.