ಬೆಂಗಳೂರು: ರಾಜ್ಯ ಸರ್ಕಾರದಿಂದ ( Karnataka Government ) ಪರಿಶಿಷ್ಟ ಜಾತಿ, ಪಂಡಗ ಅಲೆಮಾರಿ ಸಮುದಾಯಗಳ ( Scheduled Caste, Pandaga Nomadic Community ) ಸರ್ವತೋಮುಖ ಅಭಿವೃದ್ಧಿಗಾಗಿ, ಪ್ರತ್ಯೇಕ ಪರಿಶಿಷ್ಟ ಜಾತಿ, ಪಂಗಡದ ಅಲೆಮಾರಿ ಅಭಿವೃದ್ಧಿ ನಿಗಮ ಸ್ಥಾಪಿಸಿ ಆದೇಶಿಸಿದೆ. ಈ ಮೂಲಕ ಎಸ್ಸಿ, ಎಸ್ಟಿ ಸಮುದಾಯದ ಅಲೆಮಾರಿ ಸಮುದಾಯದವರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ.
‘ಕಿರಿಯ ಕವಯಿತ್ರಿ ಕು.ಅಮನ’ ಪ್ರಥಮ ಹಿಂದಿ ಕವನ ಸಂಕಲನ ಬಿಡುಗಡೆಗೊಳಿಸಿದ ‘ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್’
ಈ ಕುರಿತಂತೆ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಆ ಪ್ರತಿ ಕನ್ನಡ ನ್ಯೂಸ್ ನೌಗೆ ಲಭ್ಯವಾಗಿದೆ. ಅದರಲ್ಲಿ ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಮತ್ತು ಸರ್ವತೋಮುಖ ಅಭಿವೃದ್ಧಿಗಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಲೆಮಾರಿ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ ಆದೇಶಿಸಿದ್ದಾರೆ.
ಇನ್ನೂ ಈ ನಿಗಮಕ್ಕೆ 8 ಹುದ್ದೆಗಳನ್ನು ಸೃಜಿಸಲಾಗಿದೆ. ನಾಲ್ಕು ಹುದ್ದೆಗಳನ್ನು ನಿಯೋಜನೆ ಮೇಲೆ ನೇಮಕಾತಿ ಮಾಡಿಕೊಳ್ಳಲು ಸೂಚಿಸಲಾಗಿದೆ. ಮಿಕ್ಕ ಡಾಟಾ ಎಂಟ್ರಿ ಆಪರೇಟರ್, ವಾಹನ ಚಾಲಕರು ಹಾಗೂ ಗ್ರೂಪ್-ಡಿ ಹುದ್ದೆಗಳನ್ನು ಹೊರಗುತ್ತಿಗೆ ಮೂಲಕ ನೇಮಕ ಮಾಡಿಕೊಳ್ಳುವಂತೆ ತಿಳಿಸಲಾಗಿದೆ.
ಶಿವಮೊಗ್ಗ: ಡಿ.18ರ ನಾಳೆ ಸಾಗರ ತಾಲೂಕಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut