ಹಾವೇರಿ : ರಾಜ್ಯದಲ್ಲಿ ವಿದ್ಯಾರ್ಥಿನಿಯರಿಗೆ ಶಾಲೆಗೆ ಹೋಗಲು ಪ್ರತ್ಯೇಕ ಬಸ್ ಸೌಲಭ್ಯ ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಶಿಗ್ಗಾಂವಿ ತಾಲೂಕಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ, ಬಾಡ ಗ್ರಾಮದಲ್ಲಿ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ವಿದ್ಯಾರ್ಥಿನಿಯರಿಗೆ ಶಾಲೆಗೆ ಹೋಗಲು ಸರಿಯಾದ ಬಸ್ ವ್ಯವಸ್ಥೆ ಇಲ್ಲ. ಈ ಸಮಸ್ಯೆ ಪರಿಹಾರಕ್ಕೆ ಸರ್ಕಾರ ಹಾಗೂ ಖಾಸಗಿ ಸಹಯೋಗದಲ್ಲಿ ಪ್ರತ್ಯೇಕ ಬಸ್ ವ್ಯವಸ್ಥೆ ಮಾಡಲು ಚಿಂತನೆ ನಡೆಸಿದೆ ಎಂದು ತಿಳಿಸಿದ್ದಾರೆ.
BIGG NEWS : `ಗ್ರಾಮ ವಾಸ್ತವ್ಯ’ ಮಾಡುವ ಗ್ರಾಮಗಳ ಅಭಿವೃದ್ಧಿಗೆ 1 ಕೋಟಿ ರೂ. ಮಂಜೂರು : ಸಿಎಂ ಬೊಮ್ಮಾಯಿ ಘೋಷಣೆ
ರಾಜ್ಯದ ನಾನಾನ ಭಾಗದಲ್ಲಿ ಪ್ರವಾಸ ಮಾಡುವ ಸಂದರ್ಭದಲ್ಲಿ ವಿದ್ಯಾರ್ಥಿನಿಯರು ಶಾಲೆಗಳಿಗೆ ಹೋಗಲು ಸಾಕಷ್ಟು ತೊಂದರೆ ಅನುಭವಿಸಿದ್ದನ್ನು ಗಮನಿಸಿದ್ದೇನೆ. ಇದಕ್ಕೊಂದು ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಈ ಯೋಜನೆ ಜಾರಿಗೆ ತರಲು ನಿರ್ಧರಿಸಿದ್ದೇನೆ ಎಂದು ಹೇಳಿದ್ದಾರೆ.