ಬೆಂಗಳೂರು : ಮುಂದಿನ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವ ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ನಾಳೆ ಬಿಡುಗಡೆ ಮಾಡಲಾಗುವುದು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಘೋಷಿಸಿದ್ದಾರೆ.
BREAKING NEWS : ಬೆಳಗಾವಿಯಲ್ಲಿ ನಾಳೆ `ಮಹಾಮೇಳಾವ್’ : `MES’ ವಿರುದ್ಧ ಸಿಎಂ ಬೊಮ್ಮಾಯಿ ವಾಗ್ದಾಳಿ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶುಕ್ರವಾರವೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಬೇಕಿತ್ತು, ಆದರೆ ಧಾರ್ಮಿಕ ವೇದಿಕೆಯಲ್ಲಿ ರಾಜಕೀಯ ಬೇಡ ಸುಮ್ಮನಾದೆ. ಅಲ್ಲದೇ ಟಿಟಿಡಿಯ ಗೈಡ್ ಲೈನ್ ಉಲ್ಲಂಘನೆ ಆಗಬಾರದು ಎಂದು ಮುಂದೂಡಿದ್ದೇವೆ ಎಂದರು.
ಶುಕ್ರವಾರ ಶ್ರೀನಿವಾಸ ಕಲ್ಯಾಣ ಮುಗಿದ ನಂತರ ದೇವರ ಅನುಗ್ರಹ ಪಡೆದು 97 ರಿಂದ 116 ಸಂಭವನೀಯ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಕುಮಾರಸ್ವಾಮಿ ಅವರು ಘೋಷಿಸಿದ್ದರು. ಆದರೆ ಕಾರಣಾಂತರಗಳಿಂದ ಸೋಮವಾರ ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಆಗಲಿದೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.
BIG NEWS : ʻಭಾರತವು ವಸುದೈವ ಕುಟುಂಬಕಂ ಸಿದ್ಧಾಂತವನ್ನು ನಂಬುತ್ತದೆʼ: ಕೇಂದ್ರ ಸಚಿವ ಮನ್ಸುಖ್ ಮಾಂಡವಿಯಾ