ಜಾರ್ಖಂಡ್ : ದೆಹಲಿಯಲ್ಲಿ ನಡೆದ ಶ್ರದ್ಧಾ ಹತ್ಯೆ ಪ್ರಕರಣವನ್ನು ಹೋಲುವಂತಹ ಘಟನೆ ಜಾರ್ಖಂಡಿನಲ್ಲಿ ನಡೆದಿದೆ. ಪತಿಯೋರ್ವ ತನ್ನ ಪತ್ನಿಯನ್ನು ಕೊಲೆಗೈದು ಆಕೆಯ ದೇಹವನ್ನು 12 ತುಂಡುಗಳಾಗಿ ಕತ್ತರಿಸಿರುವ ಘಟನೆ ನಡೆದಿದೆ.
ಘಟನೆ ಸಂಬಂಧ ಬೋರಿಯೊ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೇಸ್ ದಾಖಲಾಗಿದ್ದು, ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದು, ತನಿಖೆ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಕೊಲೆಯಾದ ಮಹಿಳೆಯಮನ್ನು ರೂಬಿಕಾ ಪಹಾಡಿನ್ ಎಂದು ಗುರುತಿಸಲಾಗಿದ್ದು, ಬಂಧಿತ ಆರೋಪಿಯನ್ನು ದಿಲ್ದಾರ್ ಅನ್ಸಾರಿ ಎಂದು ಗುರುತಿಸಲಾಗಿದೆ. ಕೊಲೆಯಾದ ರೂಬಿಕಾ ದಿಲ್ದಾರ್ ಎರಡನೇ ಪತ್ನಿಯಾಗಿಗಿದ್ದಾರೆ.
ಕೆಲ ದಿನಗಳ ಹಿಂದೆ ಮಹಿಳೆಯ ಕುಟುಂಬದವರು ಕಾಣೆಯಾದ ಬಗ್ಗೆ ದೂರು ದಾಖಲಿಸಿದ್ದರು. ತನಿಖೆ ಕೈಗೊಂಡ ಪೊಲೀಸರನ್ನು ಸಂಪರ್ಕಿಸಿದಾಗ ಘಟನೆ ಬೆಳಕಿಗೆ ಬಂದಿದ್ದು, ತನಿಖೆಯ ಸಂದರ್ಭದಲ್ಲಿ, ಪೊಲೀಸರು ರುಬಿಕಾ ಅವರ ಛಿದ್ರಗೊಂಡ ದೇಹವನ್ನು ವಶಪಡಿಸಿಕೊಂಡರು.
ಆರೋಪಿಗಳು ಎಲೆಕ್ಟ್ರಿಕ್ ಕಟರ್ನಂತಹ ಹರಿತವಾದ ವಸ್ತುವನ್ನು ಬಳಸಿ ಮಹಿಳೆಯ ದೇಹವನ್ನು ಹಲವು ತುಂಡುಗಳಾಗಿ ಕತ್ತರಿಸಿದ್ದ ಎಂದು ಪೊಲೀಸರು ಶಂಕಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.
BIGG NEWS : ನಾಳೆ `ಜೆಡಿಎಸ್’ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ : ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಘೋಷಣೆ
BREAKING NEWS : ಬೆಳಗಾವಿಯಲ್ಲಿ ನಾಳೆ `ಮಹಾಮೇಳಾವ್’ : `MES’ ವಿರುದ್ಧ ಸಿಎಂ ಬೊಮ್ಮಾಯಿ ವಾಗ್ದಾಳಿ
BIG NEWS : ʻಭಾರತವು ವಸುದೈವ ಕುಟುಂಬಕಂ ಸಿದ್ಧಾಂತವನ್ನು ನಂಬುತ್ತದೆʼ: ಕೇಂದ್ರ ಸಚಿವ ಮನ್ಸುಖ್ ಮಾಂಡವಿಯಾ