ಬೆಳಗಾವಿ : ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗಾಗಿ ನಾಳೆ ಸವದತ್ತಿಯಲ್ಲಿ ಪಂಚಮಸಾಲಿಗಳಿಂದ ಬೃಹತ್ ವಿರಾಟ ಸಮಾವೇಶ ನಡೆಯಲಿದೆ ಎಂದು ಕೂಡಲಸಂಗಮ ಪಂಚಮಸಾಲಿ ಮಠದ ಪೀಠಾಧ್ಯಕ್ಷ ಸ್ರೀ ಬಸವಜಯಮೃತ್ಯುಂಜಯ ಸ್ವಾಮೀಜಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಸೆಂಬರ್ 19 ರ ನಾಳೆ ಪಂಚಮಸಾಲಿಗಳಿಂದ ವಿರಾಟ ಸಮಾವೇಶ ನಡೆಯಲಿದೆ. ಸಮಾವೇಶಕ್ಕೂ ಮುನ್ನ ಸಿಎಂ ಬೊಮ್ಮಾಯಿ ಮೀಸಲಾತಿ ಘೋಷಣೆ ಮಾಡಿದ್ರೆ ಅಲ್ಲೇ ಸಂಭ್ರಮಾಚರಣೆ ಮಾಡುತ್ತೇವೆ. ಮೀಸಲಾತಿ ವಿಳಂಬವಾದರೆ ಹೋರಾಟ ಮುಂದುವರೆಯಲಿದೆ ಎಂದಿದ್ದಾರೆ.