ಪಾಲ್ಘರ್(ಮಹಾರಾಷ್ಟ್ರ): ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಎಂಟು ಜನರು 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಬೆಳಕಿಗೆ ಬಂದಿದೆ. ಎಲ್ಲ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಇಂದು ತಿಳಿಸಿದ್ದಾರೆ.
ಆರೋಪಿಗಳು ತಮ್ಮ ಬೀಚ್ ಹಳ್ಳಿಯಲ್ಲಿ ಯಾರೂ ಇಲ್ಲದ ಬಂಗಲೆಯಲ್ಲಿ ಬಾಲಕಿಯ ಮೇಲೆ ಅಮಾನುಷವಾಗಿ ಅತ್ಯಾಚಾರ ಎಸಗಿದ್ದಾರೆ. ನಂತರ ಅಪ್ರಾಪ್ತಳನ್ನು ಸಮುದ್ರ ತೀರಕ್ಕೆ ಕರೆದೊಯ್ದು ಅಲ್ಲಿ ಮತ್ತೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಎಂಟು ಆರೋಪಿಗಳ ವಿರುದ್ಧ ಸತ್ಪತಿ ಪೊಲೀಸ್ ಠಾಣೆಯಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ ಎಂದು ಪಾಲ್ಘರ್ ಜಿಲ್ಲೆಯ ಗ್ರಾಮಾಂತರ ಪೊಲೀಸ್ ವಕ್ತಾರರು ತಿಳಿಸಿದ್ದಾರೆ.
ಸಂತ್ರಸ್ತೆಯ ಪ್ರಕಾರ, ಆಕೆಯನ್ನು ಡಿಸೆಂಬರ್ 16 ರಂದು ಮಾಹಿಮ್ ಗ್ರಾಮದ ಖಾಲಿ ಬಂಗಲೆಗೆ ಕರೆದೊಯ್ದು ಕಾಮುಕರು ಈ ಕೃತ್ಯವೆಸಗಿದ್ದಾರೆ. ನಂತ್ರ, ಬೆಳಗ್ಗೆ ಸಮುದ್ರ ತೀರದ ಪೊದೆಗಳಿಗೆ ಕರೆದೊಯ್ದು ಅಲ್ಲಿ ಮತ್ತೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿದ್ದಾಳೆ. ಸಂತ್ರಸ್ತೆ ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಿದ್ದು, ಅದರ ಆಧಾರದ ಮೇಲೆ ಎಂಟು ಆರೋಪಿಗಳನ್ನು ಬಂಧಿಸಿದ್ದಾರೆ.
Post Office RD: ಪೋಸ್ಟ್ ಆಫೀಸ್ನಲ್ಲಿ 5000 ರೂ. ಹೂಡಿಕೆ ಮಾಡಿ, 3,48,740 ರೂ. ಪಡೆಯಿರಿ!