ಬೆಳಗಾವಿ: ವಿಧಾನಸಭೆಯಲ್ಲಿ ಗಾಂಧೀಜಿ, ನೆಹರೂ, ಅಂಬೇಡ್ಕರ್, ಸ್ವಾಮಿ ವಿವೇಕಾನಂದರ ಜೊತೆಗೆ ಸಾವರ್ಕರ್ ಫೋಟೋ ಅನಾವರಣ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ.
ಹೌದು, ಸುವರ್ಣ ಸೌಧದಲ್ಲಿ ನಾಳೆ ಸಾವರ್ಕರ್ ಫೋಟೋ ಅನಾವರಣಕ್ಕೆ ರಾಜ್ಯ ಸರ್ಕಾರ ಸಿದ್ದತೆ ನಡೆಸಿದ್ದು, ಈ ಮೂಲಕ ನಾಳೆಯಿಂದ ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಮತ್ತೆ ಸಾವರ್ಕರ್ ಚರ್ಚೆ ಹೆಚ್ಚುವುದರಲ್ಲಿ ಅನುಮಾನವಿಲ್ಲ. ನಾಳೆ ಬೆಳಗ್ಗೆ 10:30ಕ್ಕೆ ಸ್ಪೀಕರ್ ಕಾಗೇರಿ ನೇತೃತ್ವದಲ್ಲಿ ಅಧಿವೇಶನ ಆರಂಭಕ್ಕೂ ಮುನ್ನವೇ ಸಾವರ್ಕರ್ ಫೋಟೋಗಳ ಅನಾವರಣ ಕಾರ್ಯಕ್ರಮ ನಡೆಯಲಿದ್ದು, ಈ ವೇಳೆ ಫೋಟೋ ಅಸ್ತ್ರಕ್ಕೆ ಕಾಂಗ್ರೆಸಿಗರು ಸಿಡಿದೇಳುವ ಸಾಧ್ಯತೆ ಇದೇ ಎನ್ನಲಾಗಿದೆ.