ಮಂಡ್ಯ : ಚತುಷ್ಪಥದಿಂದ ದಶಪಥವಾಗಿ ಮೇಲ್ದರ್ಜೆಗೆರಿರುವ ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಿಂದ ವಾಹನ ಸವಾರರು ಮಾತ್ರವಲ್ಲದೆ ಹೆದ್ದಾರಿ ಪಕ್ಕದ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಭಾನುವಾರ ಹೇಳಿದರು.
ಮದ್ದೂರು ಪಟ್ಟಣದ ಹೊರವಲಯದ ಐಶ್ವರ್ಯ ಕಾನ್ವೆಂಟ್ ಬಳಿ ಕಾಂಗ್ರೆಸ್ ಮುಖಂಡರಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿ, ನಾನು ರಾಜ್ಯದ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ದ್ವಿಪಥವಾಗಿದ್ದ ಬೆಂಗಳೂರು – ಮೈಸೂರು ರಾಜ್ಯ ಹೆದ್ದಾರಿಯನ್ನು ಚತುಷ್ಪಥ ರಸ್ತೆಯನ್ನಾಗಿ ಮೇಲ್ದರ್ಜೆಗೆರಿಸಿ ನಿರ್ಮಾಣ ಮಾಡಲಾಗಿತ್ತು. ನಂತರ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೆರಿಸಿ ದಶಪಥ ರಸ್ತೆ ನಿರ್ಮಾಣ ಮಾಡಿರುವುದು ಭವಿಷ್ಯದ ದೃಷ್ಟಿಯಿಂದ ಒಳ್ಳೆಯ ಕ್ರಮವಾಗಿದ್ದು, ಹೆದ್ದಾರಿ ಸುತ್ತ ಮುತ್ತಲಿನ ಪ್ರದೇಶಗಳ ಮತ್ತಷ್ಟು ಅಭಿವೃದ್ಧಿಗೆ ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಮಂಡ್ಯದ ಮದ್ದೂರು ಬಳಿಯ ಎಲಿವೇಟೆಡ್ ರಸ್ತೆಯಲ್ಲಿ ಕೆಟ್ಟು ನಿಂತ ಮಾಜಿ ಸಿಎಂ ಎಸ್.ಎಂ ಕೃಷ್ಣ ಕಾರು | SM Krishna
ಈ ಹಿಂದೆ ರಾಜ್ಯ ಹೆದ್ದಾರಿಯಾಗಿದ್ದ ಬೆಂಗಳೂರು – ಮೈಸೂರು ನಡುವೆ ವಾಹನಗಳ ದಟ್ಟಣೆ ಹೆಚ್ಚಾಗಿತ್ತು, ಈ ಮಾರ್ಗದಲ್ಲಿ ಸಂಚಾರಕ್ಕೆ ಹೆಚ್ಚಿನ ಸಮಯ ವ್ಯಯವಾಗುತ್ತಿತ್ತು. ಈಗ ದಶಪಥ ರಸ್ತೆ ನಿರ್ಮಾಣದಿಂದಾಗಿ ಪ್ರಯಾಣದ ಅವಧಿ ಕಡಿಮೆ ಆಗುವುದರ ಜೊತೆಗೆ ಇಂಧನದ ವೆಚ್ಚ ಕೂಡ ಉಳಿತಾಯವಾಗುತ್ತದೆ ಎಂದು ತಿಳಿಸಿದರು.
ದಶಪಥ ಹೆದ್ದಾರಿಯೂ ಈಗಾಗಲೇ ಬೆಂಗಳೂರಿನಿಂದ ನಿಡಘಟ್ಟದವರೆಗೆ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಆನಂತರ ಕೆಲ ದಿನಗಳ ಹಿಂದೆ ನಿಡಘಟ್ಟ ಗಡಿ ಭಾಗದಿಂದ ಗೆಜ್ಜಲಗೆರೆ ಗ್ರಾಮದವರೆಗೆ ನಾನು ಪ್ರಯಾಣಿಸಿರುವ ಮೇಲು ಸೇತುವೆ ( ಎಲಿವೇಟೆಡ್ ) ರಸ್ತೆ ನಿರ್ಮಾಣ ಉತ್ತಮವಾಗಿದ್ದು, ಕೆಲವೊಂದು ಸಣ್ಣ ಪುಟ್ಟ ನ್ಯೂನತೆಗಳಿಂದ ಕೂಡಿದೆ ಅವುಗಳನ್ನು ಶೀಘ್ರವಾಗಿ ಸರಿಪಡಿಸುವ ಅಗತ್ಯವಿದೆ ಎಂದು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಸಲಹೆ ನೀಡಿದರು.
‘ಕಾಂಗ್ರೆಸ್ ಪಕ್ಷ’ ಪ್ರತಿ ಹಂತದಲ್ಲೂ ಭಯೋತ್ಪಾದನೆಯನ್ನು ವಿರೋಧ ಮಾಡಿದೆ – ಡಿಕೆಶಿ
ಇದೇ ವೇಳೆ ಮಂಡ್ಯಗೆ ತೆರಳುತ್ತಿದ್ದ ಎಸ್.ಎಂ. ಕೃಷ್ಣ ಅವರನ್ನು ಹೆಚ್.ಕೆ.ವೀರಣ್ಣಗೌಡ ಕಾಲೇಜು ಬಳಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಕೆ.ಟಿ.ಚಂದು ಹಾಗೂ ಅವರ ಪುತ್ರ ಅಪೂರ್ವ ಚಂದ್ರು ಮಾಲಾರ್ಪಣೆ ಮಾಡಿ ಸ್ವಾಗತಿಸಿದರು.
ವರದಿ: ಗಿರೀಶ್ ರಾಜ್, ಮಂಡ್ಯ – 7676768788