ಬೆಂಗಳೂರು: ನಗರದಲ್ಲಿ ನಡೆದ ಡಬಲ್ ಮರ್ಡರ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮತ್ತಷ್ಟು ಚುರುಕುಗೊಂಡಿದೆ. ಈಗಾಗಲೇ ಆರೋಪಿ ಪತ್ತೆಗಾಗಿ ನಾಲ್ಕು ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿದೆ.
BIGG NEWS: ಶಿವಮೊಗ್ಗದ ರಿಪ್ಪನ್ ಪೇಟೆಯಲ್ಲಿ ಚರ್ಮಗಂಟು ರೋಗಕ್ಕೆ ಜಾನುವಾರು ಬಲಿ; ರೈತರಲ್ಲಿ ಆತಂಕ
ಸೆಕ್ಯೂರಿಟ್ ಗಾರ್ಡ್ ಮನೆ ಕೆಲಸದವನನ್ನು ಕೊಲೆ ಮಾಡಿ ಕಳ್ಳತನ ಮಾಡಿ ಪರಾರಿಯಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿತ್ತು. ಆದರೆ ನಿನ್ನೆ ಸಂಜೆ ವೇಳೆಗೆ ನೀರಿನ ಸಂಪ್ನಲ್ಲಿ ಸೆಕ್ಯೂರಿಟಿ ಗಾರ್ಡ್ ಬಹದ್ದೂರ್ ಮೃತದೇಹ ಪತ್ತೆಯಾದ ಹಿನ್ನೆಲೆತಲ್ಲಿ ಕೋರಮಂಗಲ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ.
BIGG NEWS: ಶಿವಮೊಗ್ಗದ ರಿಪ್ಪನ್ ಪೇಟೆಯಲ್ಲಿ ಚರ್ಮಗಂಟು ರೋಗಕ್ಕೆ ಜಾನುವಾರು ಬಲಿ; ರೈತರಲ್ಲಿ ಆತಂಕ
ಪ್ರಕರಣದಲ್ಲಿ ಈತನೇ ಆರೋಪಿಯಾಗಿರಬಹುದು ಎಂದು ಶಂಕಿಸಿದ್ದ ವ್ಯಕ್ತಿಯೇ ಶವವಾಗಿ ಪತ್ತೆಯಾಗಿರುವ ಹಿನ್ನಲೆ ನಿಜವಾದ ಕೊಲೆ ಆರೋಪಿಗಳನ್ನು ಪತ್ತೆ ಹಚ್ಚಬೇಕಿದೆ.ಸದ್ಯ ಆರೋಪಿಗಳ ಪತ್ತೆಗೆ ನಾಲ್ಕು ವಿಶೇಷ ತಂಡಗಳನ್ನು ರಚನೆ ಮಾಡಲಾಗಿದ್ದು, ಸುತ್ತಮುತ್ತಲಿನ ಸುಮಾರು 50 ಸಿಸಿಟಿವಿ ಪರಿಶೀಲನೆ ನಡೆಸಲಾಗಿದೆ. ನೆಟ್ ವರ್ಕ್ ಡಂಪ್, ಸಿಡಿಆರ್ ತೆಗೆದು ಆರೋಪಿಗಳ ಪತ್ತೆಗೆ ತೀವ್ರ ಶೋಧ ನಡೆಸಲಾಗುತ್ತಿದೆ.