ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಮಾಲೀಕತ್ವದ ಶಿಕ್ಷಣ ಸಂಸ್ಥೆಗಳ ಮೇಲೆ ಸಿಬಿಐ ದಾಳಿ ನಡೆಸಿದೆ. ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ನ್ಯಾಶನಲ್ ಎಜುಕೇಶನ್ ಫೌಂಡೇಶನ್ ಮೇಲೆ ದಾಳಿ ನಡೆದಿದೆ ಅಂತ ತಿಳಿದು ಬಂದಿದೆ. ಸದ್ಯ ಡಿಕೆ ಶಿವಕುಮಾರ್ ಅವರು ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಭಾಗಹಿಸಿದ್ದಾರೆ.
ಅಧಿಕಾರಿಗಳು ಪ್ರಮುಖ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ ಎನ್ನುವುದು ತಿಳಿದು ಬಂದಿದೆ. ಈ ಹಿಂದೆ ಕೂಡ ಡಿ ಕೆ ಶಿವಕುಮಾರ್ ಅವರ ಮನೆ ಮೇಲೆ ಇಡಿ, ಆದಾಯ ತೆರಿಗೆ ಅಧಿಕಾರಿಗಳು, ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದು, ಅದಕ್ಕೆ ಸಂಬಂಧಪಟ್ಟಂತೆ ಅವರನ್ನು ಸದ್ಯ ವಿಚಾರಣೆ ನಡೆಸುತ್ತಿದೆ. ಡಿಕೆ ಶಿವಕುಮಾರ್ ಅವರು ಸಂಸ್ಥೆಯ ಚೇರ್ಮನ್ ಆಗಿದ್ದು, ಅವರ ಮಗಳಾದ ಐಶ್ವರ್ಯ ಅವರು ಕಾರ್ಯದರ್ಶಿಯಾಗಿ ಆಗಿದ್ದಾರೆ.
ಈ ನಡುವೆ ತಮ್ಮ ನ್ಯಾಶನಲ್ ಎಜುಕೇಶನ್ ಫೌಂಡೇಶನ್ ಸಿಬಿಐ ದಾಳಿಗೆ ಸಂಬಂಧಪಟ್ಟ ಮಾಧ್ಯಮಗಳ ಜೊತೆಗೆ ಮಾತನಾಡಿರುವ ಡಿ ಕೆ ಶಿವಕುಮಾರ್ ಅವರು ಚುನಾವಣೆ ಹಿನ್ನಲೆಯಲ್ಲಿ ದಾಳಿ ಮಾಡಲಾಗಿದೆ, ನನಗೆ ಅಲ್ಲದೇ ಬೇರೆಯವರಿಗೆ ಕೂಡ ಬೇರೆಯವರಿಗೆ ಕೂಡ ಕಿರುಕುಳ ನೀಡಲಾಗುತ್ತಿದೆ ಅಂತ ಹೇಳಿದರು.
ಈ ಸುದ್ದಿ ಈಗಷ್ಟೇ ಬಂದಿದೆ ಹೆಚ್ಚಿನ ಮಾಹಿತಿ ಪಡೆದ ತಕ್ಷಣ, ನಾವು ಈ ಪುಟದಲ್ಲಿ ಹೆಚ್ಚಿನ ಮಾಹಿತಿಯನ್ನು ನವೀಕರಣ ಮಾಡುತ್ತೇವೆ, ಸ್ವಲ್ಪ ಸಮಯದ ನಂತರ ಪುನಃ ಈ ಪುಟಕ್ಕೆ ಭೇಟಿ ನೀಡಿ