ಗದಗ: ಜಿಲ್ಲೆಯ ನರಗುಂದ ತಾಲೂಕಿನ ಹದಲಿ ಗ್ರಾಮದಲ್ಲಿ ಶಿಕ್ಷಕನೊಬ್ಬ ವಿದ್ಯಾರ್ಥಿಗೆ ಮನಬಂದಂತೆ ಹೊಡೆದು ಮೃತಪಟ್ಟಿರುವ ಘಟನೆ ನಡೆದಿದೆ.
BIGG NEWS: ಡಿಸೆಂಬರ್ 21ಕ್ಕೆ ವಿಧಾನಪರಿಷತ್ ಸಭಾಪತಿ ಚುನಾವಣೆ; ನಾಳೆ ಬಸವರಾಜ ಹೊರಟ್ಟಿ ನಾಮಪತ್ರ ಸಲ್ಲಿಕೆ
೯ ವರ್ಷದ ಭರತ್ ಬಾರಕೇರಿ ಸಾವನ್ನಪ್ಪಿದ ಬಾಲಕ. ಹದಲಿ ಶಾಲೆಯ ಅತಿಥಿ ಶಿಕ್ಷಕನಾಗಿರುವ ಮುತ್ತು ಹದಲಿ ವಿದ್ಯಾರ್ಥಿಯ ಹಲ್ಲೆ ಮಾಡಿದ್ದು, ಗಂಭೀರ ಗಾಯವಾಗಿತ್ತು. ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಬಾಲಕ ಮೃತಪಟ್ಟಿದ್ದಾನೆ.
ಭರತ್ ತಾಯಿ ಗೀತಾ ಕೂಡ ಅದೇ ಶಾಲೆಯಲ್ಲಿ ಸಹಶಿಕ್ಷಕಿಯಾಗಿದ್ದರು. ಆಕೆಯ ಮೇಲೂ ಮುತ್ತು ಹದಲಿ ಹಲ್ಲೆ ಮಾಡಿದ್ದಾನೆ. ಈ ಪರಿಣಾಮವಾಗಿ ಆಕೆಗೂ ಗಂಭೀರ ಗಾಯವಾಗಿದ್ದು, ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ನರಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.