ಬೆಂಗಳೂರು: ನಗರದ ವಿಭಾಗದ 7 ಜಿಲ್ಲೆಗಳಲ್ಲಿ ಜಿಲ್ಲಾ ಮಟ್ಟದ ಸಮಾವೇಶವನ್ನು ಜನವರಿಯಲ್ಲಿ ಮಾಡಲಾಗುವುದು. ಯಾವಾಗ ಎಲ್ಲಿ ಯಾವ ಸಭೆ ಮಾಡಬೇಕು ಎಂದು ಮುಂದಿನ ದಿನಗಳಲ್ಲಿ ತೀರ್ಮಾನಿಸಲಾಗುವುದು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರುಗಳು, ಹಿಂದುಳಿದ ವರ್ಗದ ಅಧ್ಯಕ್ಷರು, ಉಸ್ತುವಾರಿ ಜವಾಬ್ದಾರಿ ನೀಡಿರುವವರು ಸೇರಿ ಸಮಾವೇಶಗಳ ಆಯೋಜನೆ ಬಗ್ಗೆ ಚರ್ಚೆ ಮಾಡುತ್ತಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ತಿಳಿಸಿದರು.
‘ಪಿತಾಯಿ’ ಎಂಬ ಪದವನ್ನು ನಮ್ಮ ಜವಾನರಿಗೆ ಬಳಸಬಾರದು: ತವಾಂಗ್ ಘರ್ಷಣೆಗೆ ಜೈಶಂಕರ್ ತಿರುಗೇಟು | ‘Pitai’ Word
ಇಂದು ನಗರದಲ್ಲಿ ಸುದ್ದಿಗೋಷ್ಠಿ ನಡಸಿ ಮಾತನಾಡಿದಂತ ಅವರು, ಜನವರಿಯಲ್ಲಿ ರಾಜ್ಯಾಧ್ಯಂತ ಓಬಿಸಿ ಸಮಾವೇಶ ಮಾಡಲಾಗುತ್ತದೆ. ಈ ಸಮಾವೇಶದಲ್ಲಿ ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರು ಬಸ್ ಯಾತ್ರೆ ಮಾಡುತ್ತಿರುವುದರಿಂದ ಎಲ್ಲಾ ಜಿಲ್ಲೆಗಳ ಸಮಾವೇಶಕ್ಕೆ ಆಗಮಿಸಲು ಆಗುವುದಿಲ್ಲ. ಮಾಜಿ ಸಚಿವರು, ಸಂಸದರು ಹಾಗೂ ಇತರ ಹಿರಿಯ ನಾಯಕರೆಲ್ಲರೂ ಈ ಸಮಾವೇಶಗಳಲ್ಲಿ ಭಾಗವಹಿಸಲಿದ್ದಾರೆ ಎಂದರು.
ಬೆಂಗಳೂರಿನಲ್ಲಿ ಮೂರು ಜಿಲ್ಲಾ ಕಾಂಗ್ರೆಸ್ ಇದ್ದರೂ 1 ಕಡೆ ದೊಡ್ಡ ಮಟ್ಟದಲ್ಲಿ ಸಮಾವೇಶ ಮಾಡುತ್ತೇವೆ. ಉಳಿದಂತೆ ಗ್ರಾಮಾಂತರ, ಚಿಕ್ಕಬಳ್ಳಾಪುರ ಕೋಲಾರ ಹಾಗೂ ಇತರ ಜಿಲ್ಲೆಗಳಲ್ಲಿ ಪ್ರತ್ಯೇಕ ಸಮಾವೇಶ ಮಾಡಲಾಗುವುದು ಎಂದು ತಿಳಿಸಿದರು
ಸಾರ್ವಕರ್ ವಿಚಾರವಾಗಿ ಕೇಳಿದ ಪ್ರಶ್ನೆಗೆ, ಈ ವಿಚಾರ ಗಮನ ಬೇರೆಡೆ ಸೆಳಎಯುವುದು ಬೇಡ. ಈ ವಿಚಾರವಾಗಿ ನಾವು ಬೇರೆ ಸಮಯದಲ್ಲಿ ಮಾತನಾಡುತ್ತೇವೆ’ ಎಂದು ತಿಳಿಸಿದರು.