ಬೆಂಗಳೂರು: ಉಡುಪಿಯಲ್ಲಿ ಫೆಬ್ರವರಿ 11 ಮತ್ತು 12ರಂದು ರಾಜ್ಯಮಟ್ಟದ ಯಕ್ಷಗಾನ ಸಾಹಿತ್ಯ ಸಮ್ಮೇಳನವನ್ನು ಸರ್ಕಾರದಿಂದ ಇದೇ ಮೊದಲ ಬಾರಿಗೆ ಆಯೋಜಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ಧರಿಸಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ನೇತೃತ್ವದಲ್ಲಿ ಇಂದು ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಸಾಹಿತ್ಯ ಸಮ್ಮೇಳನಕ್ಕೆ ಸರಿ ಸಮಾನ ಸಿದ್ಧತೆ ಹಾಗೂ ಗುಣಮಟ್ಟದೊಂದಿಗೆ ಯಕ್ಷಗಾನ ಸಾಹಿತ್ಯ ಸಮ್ಮೇಳನ ನಡೆಸಲು ನಿರ್ಧರಿಸಿದ್ದು, ಮೇಳ ಹಾಗೂ ಕಲಾವಿದರ ಸಮಸ್ಯೆ ಬಗ್ಗೆ ಪ್ರತ್ಯೇಕ ಗೋಷ್ಠಿ ಆಯೋಜಿಸಲಾಗುತ್ತದೆ.ಯಕ್ಷರಂಗದ ಮೇಳದ ಯಜಮಾನರಿಗೆ, ಪಿಹೆಚ್ಡಿ ಪ್ರಬಂಧ ಮಂಡಿಸಿದವರಿಗೆ ಹಾಗೂ ಬಡ ಕಲಾವಿದರಿಗೆ ಸನ್ಮಾನಿಸಲು ತೀರ್ಮಾನಿಸಲಾಗಿದೆ.