ಬೆಳಗಾವಿ: ಸುವರ್ಣಸೌಧದಲ್ಲಿ ವೀರ ಸಾವರ್ಕರ್ ಅವರ ಭಾವಚಿತ್ರ ಅಳವಡಿಸಿರುವುದಕ್ಕೆ ಪರೋಕ್ಷವಾಗಿ ವಿರೋಧ ವ್ಯಕ್ತಪಡಿಸುವ ಹುನ್ನಾರದ ಅಂಗವಾಗಿ ಕಾಂಗ್ರೆಸ್ ಪಕ್ಷವು ( Congress Party ) ಮತ್ತಷ್ಟು ಮಹನೀಯರ ಭಾವಚಿತ್ರಗಳನ್ನು ಹಾಕಬೇಕೆಂದು ಒತ್ತಾಯಿಸುತ್ತಾ ದೊಡ್ಡಪಟ್ಟಿಯನ್ನೇ ಇಟ್ಟುಕೊಂಡು ಇಂದು ಪ್ರತಿಭಟನೆ ನಡೆಸಿರುವುದು ವಿಪರ್ಯಾಸವೇ ಸರಿ ಎಂಬುದಾಗಿ ಲೋಕೋಪಯೋಗಿ ಸಚಿವ ಸಿ.ಸಿ ಪಾಟೀಲ್ ( Minister CC Patil ) ಕಿಡಿಕಾರಿದ್ದಾರೆ.
ಡಿಕೆಶಿ ಶಿಕ್ಷಣ ಸಂಸ್ಥೆ ಮೇಲೆ ಸಿಬಿಐ ದಾಳಿ ವಿಚಾರ: ಬಿಜೆಪಿ ಅಧಿಕಾರ ದುರ್ಬಳಕೆ ಮಾಡಿಲ್ಲ – ಬಾಲಚಂದ್ರ ಜಾರಕಿಹೊಳಿ
ಇಂದು ಸುವರ್ಣ ಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕಾಂಗ್ರೆಸ್ ಪಕ್ಷದ ಸರ್ಕಾರವಿದ್ದಾಗಲೂ ಇಲ್ಲಿ ಅಧಿವೇಶನಗಳನ್ನು ನಡೆಸಲಾಗಿತ್ತು. ಆದರೆ ಆಗ ಮುಖ್ಯಮಂತ್ರಿಗಳಾಗಿದ್ದ ಸಿದ್ದರಾಮಯ್ಯನವರಾಗಲಿ, ಮಂತ್ರಿಗಳಾಗಿದ್ದ ಡಿ ಕೆ ಶಿವಕುಮಾರ್ ಅವರಾಗಲಿ ಯಾಕೆ ಗಾಂಧಿ, ಅಂಬೇಡ್ಕರ್, ಬಸವಣ್ಣನವರ ಭಾವಚಿತ್ರಗಳನ್ನೇ ಮರೆತಿದ್ದರು ? ಆಗಲೇ ಸಭಾಧ್ಯಕ್ಷರ ಮನವೊಲಿಸಿ ತಮ್ಮ ಆಯ್ಕೆಯ ಪ್ರಕಾರ ಅವರೆಲ್ಲರ ಭಾವಚಿತ್ರಗಳನ್ನು ಅನಾವರಣಗೊಳಿಸಬಹುದಿತ್ತಲ್ಲವೇ ಎಂದು ಪ್ರಶ್ನಿಸಿದರು.
ಈಗ ನಮ್ಮ ಬಿಜೆಪಿ ಸರ್ಕಾರ ಈ ಅರ್ಥಪೂರ್ಣ ಕ್ರಮ ಕೈಗೊಂಡಿದ್ದನ್ನು ಕಾಂಗ್ರೆಸ್ ಮುಖಂಡರಿಗೆ ಜೀರ್ಣಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಆಗ ಸುಮ್ಮನಿದ್ದು, ಈಗ ಮೊಸರಲ್ಲಿ ಕಲ್ಲು ಹುಡುಕುವ ಕೆಲಸಕ್ಕೆ ಕಾಂಗ್ರೆಸ್ಸಿಗರು ಮುಂದಾಗುತ್ತಿರುವುದು ವಿರೋಧಾಭಾಸದ ನಡೆಯಾಗಿದೆ ಎಂದು ಹೇಳಿದರು.