ಬೆಳಗಾವಿ : ಗಡಿ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಗಂಭೀರತೆ, ಕಾಳಜಿ ಕಾಣಿಸುತ್ತಿಲ್ಲ ಎಂದು ಮಾಜಿ ಸಚಿವ ಹೆಚ್.ಕೆ. ಪಾಟೀಲ್ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಡಿ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಗಂಭೀತರೆ, ಕಾಳಜಿ ಕಾಣಿಸುತ್ತಿಲ್ಲ. ಕೇಂದ್ರ ಗೃಹ ಸಚಿವರ ಸಭೆಯನ್ನು ಸಿಎಂ ಬಸವರಾಜ ಬೊಮ್ಮಾಯಿ ತಿರಸ್ಕಾರ ಮಾಡಬೇಕಿತ್ತು. ನಮ್ಮ ಕರ್ನಾಟಕ ಸರ್ಕಾರಕ್ಕೆ ಶಾಂತಿ ಕಾಪಾಡಲು ಆಗುತ್ತಿಲ್ಲ ಎಂದರು.
ಗಡಿ ವಿಚಾರದಲ್ಲಿ ತಪ್ಪು ಹೆಜ್ಜೆ ಇಟ್ಟಿರುವ ರಾಜ್ಯ ಸರ್ಕಾರ ಜನರ ಕ್ಷಮೆ ಕೇಳಬೇಕು. ವಿಧಾನಸಭೆಯಲ್ಲಿ ಗಡಿ ವಿವಾದದ ಕುರಿತು ಚರ್ಚೆ ಮಾಡುತ್ತೇನೆ ಎಂದರು.
BIGG NEWS: ಬೆಳಗಾವಿ ಸುವರ್ಣಸೌಧದತ್ತ ಪಂಚಮಸಾಲಿ ಸಮಾಜದ ಪಾದಯಾತ್ರೆ: ಅಧಿವೇಶನದ ಎರಡನೇ ದಿನವೂ ಸರಣಿ ಪ್ರತಿಭಟನೆ