ಬೆಳಗಾವಿ: ಡಿ.ಕೆ ಶಿವಕುಮಾರ್ ಒಡೆತನದ ಶಿಕ್ಷಣ ಸಂಸ್ಥೆ ಮೇಲೆ ಸಿಬಿಐ ದಾಳಿ ವಿಚಾರವಾಗಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.
BIGG NEWS: ನೈತಿಕ ಪೊಲೀಸ್ಗಿರಿ ಆರೋಪ; ಸುನಿಲ್ ಕುಮಾರ್ ವಿರುದ್ಧ ಹಿಂದೂ ಕಾರ್ಯಕರ್ತರ ಕೆಂಡಾಮಂಡಲ
ಸಿಬಿಐ ಅನ್ನೋದು ಒಂದು ಸ್ವತಂತ್ರ ಸಂಸ್ಥೆ ಆಗಿದೆ. ಡಿಕೆಶಿ ಮೇಲಿರುವ ಕೇಸ್ ಆಧಾರದ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಡಿಕೆಶಿ ಒಡೆತನದ ಶಿಕ್ಷಣ ಸಂಸ್ಥೆ ಮೇಲೆ ಸಿಬಿಐ ದಾಳಿ ವಿಚಾರಣೆ ನಡೆಸಿದ್ದಾರೆ. ಸಿಬಿಐ ಒಂದು ಸ್ವತಂತ್ರ ಸಂಸ್ಥೆ ಎಂದ ಸಿಎಂ ಹೇಳಿದ್ದಾರೆ. ಡಿಕೆಶಿ ಮೇಲಿರುವ ಕೇಸ್ ಗಳ ಆಧಾರದ ಮೇಲೆ ಕ್ರಮ ತೆಗೆದುಕೊಳ್ತಿದೆ. ಇದು ಡಿಕೆ ಶಿವಕುಮಾರ್ ಗೂ ಕೂಡ ಗೊತ್ತಿದೆ ಎಂದು ಹೇಳಿದ್ದಾರೆ.
ಕೆ.ಎಸ್ ಈಶ್ವರಪ್ಪ, ರಮೇಶ್ ಜಾರಕಿಹೊಳಿ ಅಸಮಾಧಾನ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಅವರ ಭಾವನೆ ನನಗೆ ಅರ್ಥವಾಗಿದೆ ಎಂದು ಹೇಳಿದ್ದಾರೆ.