ನವದೆಹಲಿ : ಸಂಸತ್ತಿನ ಚಳಿಗಾಲದ ಅಧಿವೇಶನದ 11ನೇ ಕಾರ್ಯಕಾರಿಣಿ ದಿನವಾದ ಇಂದು (ಮಂಗಳವಾರ) ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವ್ರ ಕೆಲವು ಹೇಳಿಕೆಗಳಿಗೆ ಸಂಬಂಧಿಸಿದಂತೆ ಬಿಜೆಪಿ ಮತ್ತು ವಿರೋಧ ಪಕ್ಷದ ಸದಸ್ಯರ ನಡುವೆ ತೀವ್ರ ವಾಗ್ವಾದಕ್ಕೆ ಸಾಕ್ಷಿಯಾಯಿತು. ಕೇಂದ್ರ ಸಚಿವ ಪಿಯೂಷ್ ಗೋಯಲ್ ಮತ್ತು ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರು ತೀವ್ರ ವಾಗ್ವಾದದಲ್ಲಿ ತೊಡಗಿದ್ದರಿಂದ ರಾಜ್ಯಸಭೆಯು ಮಾತಿನ ಘರ್ಷಣೆಯಲ್ಲಿ ಆರಂಭವಾಯ್ತು.
ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿ ವಾಗ್ದಾಳಿ.!
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಸಂಸತ್ತಿನಲ್ಲಿ ಗದ್ದಲ ಉಂಟಾಗಿದ್ದು, ರಾಜ್ಯಸಭೆಯಲ್ಲಿ ಬಿಜೆಪಿ ಖರ್ಗೆ ಕ್ಷಮೆಯಾಚಿಸುವಂತೆ ಒತ್ತಾಯಿಸಿದೆ. ಖರ್ಗೆ ಅವಾಚ್ಯ ಶಬ್ದ ಬಳಸಿದ್ದಾರೆ ಎಂದು ಕೇಂದ್ರ ಸಚಿವ ಹಾಗೂ ಬಿಜೆಪಿ ನಾಯಕ ಪಿಯೂಷ್ ಗೋಯಲ್ ಹೇಳಿದ್ದು, ಅವರ ಅಸಭ್ಯ ಭಾಷಣವನ್ನ ತೀವ್ರವಾಗಿ ಖಂಡಿಸುತ್ತೇನೆ ಎಂದರು. ಇನ್ನು ಇದೇ ವೇಳೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಇದೊಂದು ಡುಪ್ಲಿಕೇಟ್ ಕಾಂಗ್ರೆಸ್ ಎಂದು ಹೇಳಿದ್ದು, ಇದು ಸರ್ದಾರ್ ವಲ್ಲಭಭಾಯಿ ಪಟೇಲ್, ಮಹಾತ್ಮ ಗಾಂಧಿಯವರ ಕಾಂಗ್ರೆಸ್ ಅಲ್ಲ ಎಂದು ಕಿಡಿಕಾರಿದರು.
ಬಿಜೆಪಿ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸ್ವಾತಂತ್ರ್ಯ ಹೋರಾಟದಲ್ಲಿ ಅನೇಕ ಕಾಂಗ್ರೆಸ್ ನಾಯಕರು ಪ್ರಾಣ ತೆತ್ತಿದ್ದಾರೆ, ಆದರೆ ಬಿಜೆಪಿಯವರ ಮನೆಯಿಂದ ಸ್ವಾತಂತ್ರ್ಯ ಹೋರಾಟದಲ್ಲಿ ಒಂದು ನಾಯಿ ಕೂಡ ಸಾಯಲಿಲ್ಲ ಎಂದರು. ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟಿದ್ದೇವೆ ಎಂದ ಖರ್ಗೆ, ದೇಶದ ಐಕ್ಯತೆಗಾಗಿ ಇಂದಿರಾ, ರಾಜೀವ್ ಗಾಂಧಿ ಪ್ರಾಣ ತ್ಯಾಗ ಮಾಡಿದ್ದಾರೆ, ಆದರೆ ನೀವೇನು ಮಾಡಿದ್ದೀರಿ? ಎಂದರು.
ಖರ್ಗೆ ವಿರುದ್ಧ ಬಿಜೆಪಿ ವಾಗ್ದಾಳಿ.!
ಕೇಂದ್ರ ಸಚಿವ ಕಿರಣ್ ರಿಜಿಜು, ‘ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಇಷ್ಟು ಕೀಳುಮಟ್ಟದ್ದರು ಮತ್ತು ಆಕ್ಷೇಪಾರ್ಹ ಹೇಳಿಕೆಗಳನ್ನ ನೀಡುತ್ತಾರೆ ಎಂದು ನಾನು ನಂಬಲು ಸಾಧ್ಯವಿಲ್ಲ. ರಾಜಕೀಯ ಪಕ್ಷದ ನಾಯಕನಾಗಿ ಅವರು ತಮ್ಮ ಜವಾಬ್ದಾರಿಯನ್ನ ಅರ್ಥಮಾಡಿಕೊಳ್ಳಬೇಕು. ನಾವು ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು. ಇದು ಅಸಹ್ಯಕರ, ದುರದೃಷ್ಟಕರ ಮತ್ತು ಅನಗತ್ಯ.
ಇನ್ನು ಖರ್ಗೆ ಸಾಹೇಬರ ಪಕ್ಷ ಎಲ್ಲರನ್ನೂ ನಾಯಿಯಂತೆ ಪರಿಗಣಿಸುತ್ತದೆ ಎಂದು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಹೇಳಿದ್ದು, ನನ್ನ ತಾಯಿಯ ಅಜ್ಜ ಸುಮಾರು 5 ವರ್ಷಗಳ ಕಾಲ ಜೈಲಿನಲ್ಲಿದ್ದು ಕಾಂಗ್ರೆಸ್ನಲ್ಲಿದ್ದರು. ಇಲ್ಲಿಯವರೆಗೂ ಕಾಂಗ್ರೆಸ್ ಎಲ್ಲರನ್ನೂ ನಾಯಿಯಂತೆ ಪರಿಗಣಿಸಿದೆ ಎಂದರು.
BIGG NEWS : ಹೊಸ ಪಠ್ಯಕ್ರಮದಲ್ಲಿ ‘ಎಲ್ಲಾ ಲಿಂಗಗಳ ಸಮತೋಲಿತ ದೃಷ್ಟಿಕೋನ’ ; ‘NCERT’ ಮಹತ್ವದ ಮಾಹಿತಿ
BIGG NEWS: ಶಿವಮೊಗ್ಗದಲ್ಲಿ ಅನುಮಾನಾಸ್ಪದವಾಗಿ ಓಡಾಡಿಕೊಂಡಿದ್ದ ಯುವಕ, ಯುವತಿ ಪೊಲೀಸರ ವಶಕ್ಕೆ