ಬೆಳಗಾವಿ: ರಮೇಶ್ ಜಾರಕಿಹೊಳಿ ಮತ್ತು.ಕೆ. ಎಸ್ ಈಶ್ವರಪ್ಪ ಅವರೊಂದಿಗೆ ಸಂಪರ್ಕಲ್ಲಿದ್ದೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸುವರ್ಣಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು,ರಮೇಶ್ ಜಾರಕಿಹೊಳಿ ಮತ್ತು ಕೆ.ಎಸ್.ಈಶ್ವರಪ್ಪ ಅವರು ವಿಧಾನಮಂಡಲ ಅಧಿವೇಶನದಲ್ಲಿ ಭಾಗವಹಿಸದೇ ಇರುವುದು ಬಹಿಷ್ಕಾರವಲ್ಲ. ತಮ್ಮ ಮೇಲಿದ್ದ ಪ್ರಕರಣಗಳಲ್ಲಿ ಮುಕ್ತರಾದ ಮೇಲೆ ಮತ್ತೊಮ್ಮೆ ಸಂಪುಟಕ್ಕೆ ಸೇರಬೇಕೆನ್ನುವ ಅವರ ಚಿಂತನೆ ಸರಿಯಿದೆ. ಅವರ ವಿಚಾರವನ್ನು ದೆಹಲಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಚರ್ಚೆ ಮಾಡಿದ್ದೇನೆ. ಅವರೂ ಕೂಡ ಸಕಾರಾತ್ಮಕವಾಗಿದ್ದಾರೆ. ಮಿಕ್ಕ ವಿಚಾರಗಳನ್ನು ವೈಯಕ್ತಿಕವಾಗಿ ಹೇಳಲಾಗುವುದು. ಕೆಲವು ವಿಚಾರಗಳನ್ನು ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ ಎಂದರು.
ಸಿಬಿಐ ದಾಳಿ
ಸಿಬಿಐ ದಾಳಿ ಬಗ್ಗೆ ಡಿ.ಕೆ ಶಿವಕುಮಾರ್ ಅವರ ಹೇಳಿಕೆ ಗೆ ಉತ್ತರಿಸಿ ಸಂವಿಧಾನಾತ್ಮಕವಾಗಿ ಸ್ವಾಯತ್ತವಾಗಿರುವ ಸಂಸ್ಥೆ ಅವರ ಬಳಿ ಇರುವ ಪ್ರಕರಣ ಇದೆ ಅದರ ಮೇಲೆ ಅವರು ಕ್ರಮ ಕೈಗೊಳ್ಳುತ್ತಾರೆ. ಇದು ಡಿ.ಕೆ.ಶಿವಕುಮಾರ್ ಅವರಿಗೂ ತಿಳಿದಿರುವ ವಿಚಾರ ಎಂದರು.
ಹಾಲಾಲ್ ಕಟ್
ಹಾಲಾಲ್ ಕುರಿತು ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಹಾಲಾಲ್ ವಿಷಯಕ್ಕೂ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದರು.