ಕೊಪ್ಪಳ: ಶಾಲೆಯ ಮಧ್ಯಾಹ್ನ ಬಿಸಿಯೂಟ ಸೇವಿಸಿ ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿರುವ ಘಟನೆ ಕೊಪ್ಪಳ ಜಿಲ್ಲೆಯ ಅಳವಂಡಿ ಗ್ರಾಮದಲ್ಲಿ ನಡೆದಿದೆ.
BREAKING NEWS : 545 ‘PSI’ ನೇಮಕಾತಿ ಹಗರಣ : ಕಿಂಗ್ ಪಿನ್ ರೌದ್ರಗೌಡ ನಿವಾಸದ ಮೇಲೆ ‘CID’ ದಾಳಿ
ಸುಮಾರು 20 ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದು, ವಾಂತಿ, ಭೇದಿಯಿಂದ ವಿದ್ಯಾರ್ಥಿಗಳು ಬಳಲುತ್ತಿದ್ದಾರೆ. ಜಿಲ್ಲೆಯ ಆರ್ ಎಂಎಸ್ ಹಾಸ್ಟೆಲ್ ಹಾಗೂ ಸರ್ಕಾರಿ ಬಾಲಕಿಯರ ಫ್ರೌಢಶಾಲೆಯ ವಿದ್ಯಾರ್ಥಿನಿಯರು ಬಿಸಿಯೂಟ ಸೇವಿಸಿದ್ದಾರೆ. ಸಂಜೆ ಆಗುತ್ತಿದ್ದಂತೆ ಒಬ್ಬರ ಹಿಂದೆ ಒಬ್ಬರಂತೆ ಅಸ್ವಸ್ಥರಾಗಿದ್ದಾರೆ. ಕೂಡಲೇ ಅಸ್ವಸ್ಥರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಶಿಕ್ಷಕರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.