ಬೆಂಗಳೂರು : ಜನವರಿ 11 ರಿಂದ ಕಾಂಗ್ರೆಸ್ ಪಕ್ಷದ ಬಸ್ ಯಾತ್ರೆ ಆರಂಭವಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಜನವರಿ 11 ರಿಂದ ಕಾಂಗ್ರೆಸ್ ಪಕ್ಷದ ಬಸ್ ಯಾತ್ರೆ ಆರಂಭವಾಗಲಿದೆ. ಮಹಾತ್ಮಾ ಗಾಂಧೀಜಿ ಅವರು ಅಧ್ಯಕ್ಷತೆ ವಹಿಸಿಕೊಂಡಿದ್ದ ಕಾಂಗ್ರೆಸ್ನ ಪ್ರಥಮ ಅಧಿವೇಶನ ಬೆಳಗಾವಿಯಲ್ಲಿ ನಡೆದಿತ್ತು. ಇಂತಹ ಐತಿಹಾಸಿಕ ಹಿನ್ನೆಲೆಯ ಬೆಳಗಾವಿಯಿಂದಲೇ ಈ ಯಾತ್ರೆ ಆರಂಭವಾಗಲಿದೆ ಜ.14, 15ರಂದು ಸಂಕ್ರಾಂತಿ ಪ್ರಯುಕ್ತ ಯಾತ್ರೆಗೆ ವಿರಾಮವಿರಲಿದೆ ಎಂದು ಹೇಳಿದ್ದಾರೆ.
‘ಜನವರಿ 16 ರಿಂದ 19ರ ವರೆಗೆ ಹೊಸಪೇಟೆ, ಕೊಪ್ಪಳ, ಬಾಗಲಕೋಟೆ, ಗದಗ, ಹಾವೇರಿ, ದಾವಣಗೆರೆ ಜಿಲ್ಲೆಗಳಲ್ಲಿ ಯಾತ್ರೆ ಮುಂದುವರೆಯಲಿದ್ದು, ಜ. 20 ರಂದು ಒಂದು ದಿನ ವಿರಾಮ ಇರಲಿದೆ. ನಂತರ ಪುನಃ ಜನವರಿ 21 ರಿಂದ 23ರ ವರೆಗೆ ಹಾಸನ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಯಾತ್ರೆ ನಡೆಯಲಿದೆ’ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ಯಾತ್ರೆಗೆ ಟಕ್ಕರ್ ಕೊಡಲು ಕಾಂಗ್ರೆಸ್ ಬಸ್ ಯಾತ್ರೆ ಆರಂಭಿಸಲು ಸಜ್ಜಾಗಿದೆ.
ಬಸ್ ಯಾತ್ರೆಯ ಬಳಿಕ 2 ತಂಡಗಳನ್ನಾಗಿ ಮಾಡಿಕೊಂಡು 224 ಕ್ಷೇತ್ರಗಳಿಗೆ ಪ್ರವಾಸ ಮಾಡುತ್ತೇವೆ.ನಾನು ದಕ್ಷಿಣ ಭಾಗದ ಜಿಲ್ಲೆಗಳಲ್ಲಿ ಹಾಗೂ ಸಿದ್ದರಾಮಯ್ಯ ಅವರು ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಪ್ರವಾಸ ಮಾಡಲಿದ್ದೇವೆ. ಕರಾವಳಿ ಹಾಗೂ ಬೆಂಗಳೂರು ಭಾಗದಲ್ಲಿ ನಾನು ಸಿದ್ದರಾಮಯ್ಯ ಇಬ್ಬರೂ ಒಟ್ಟಿಗೆ ಪ್ರವಾಸ ಮಾಡುತ್ತೇವೆ ಎಂದು ಹೇಳಿದ್ದಾರೆ.
ಜನವರಿ 11 ರಿಂದ ಕಾಂಗ್ರೆಸ್ ಪಕ್ಷದ ಬಸ್ ಯಾತ್ರೆ ಆರಂಭವಾಗಲಿದೆ
ಮಹಾತ್ಮಾ ಗಾಂಧೀಜಿ ಅವರು ಅಧ್ಯಕ್ಷತೆ ವಹಿಸಿಕೊಂಡಿದ್ದ ಕಾಂಗ್ರೆಸ್ನ ಪ್ರಥಮ ಅಧಿವೇಶನ ಬೆಳಗಾವಿಯಲ್ಲಿ ನಡೆದಿತ್ತು. ಇಂತಹ ಐತಿಹಾಸಿಕ ಹಿನ್ನೆಲೆಯ ಬೆಳಗಾವಿಯಿಂದಲೇ ಈ ಯಾತ್ರೆ ಆರಂಭವಾಗಲಿದೆ
ಜ.14, 15ರಂದು ಸಂಕ್ರಾಂತಿ ಪ್ರಯುಕ್ತ ಯಾತ್ರೆಗೆ ವಿರಾಮವಿರಲಿದೆ.
– @DKShivakumar pic.twitter.com/8564mpZl6n— Karnataka Congress (@INCKarnataka) December 20, 2022
‘ಶಿಷ್ಯ ವೇತನ’ದ ಕುರಿತು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ |Scholarship 2022
BIGG NEWS : ಚರ್ಮಗಂಟು ರೋಗ : ಬೆಳಗಾವಿ ಜಿಲ್ಲೆಗೆ 10 ಕೋಟಿ ಪರಿಹಾರ |Lumpy Skin Disease