ಬೆಳಗಾವಿ : ರೈತ ಸಮುದಾಯಕ್ಕೆ ಸಚಿವ ಪ್ರಭು ಚವ್ಹಾಣ್ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಪ್ರೋತ್ಸಾಹ ಧನವನ್ನು ರೈತರ ಖಾತೆಗೆ ಪಾವತಿಸಲಾಗುತ್ತದೆ ಎಂದು ಹೇಳಿದರು.
ಕಲಾಪದಲ್ಲಿ ಪ್ರಶ್ನೆಯೊಂದಕ್ಕೆ ಸ್ಪಷ್ಟನೆ ನೀಡಿದ ಸಚಿವರು ಹಾಲು ಉತ್ಪಾದಕರಿಗೆ 5 ರೂ. ಗಿಂತ ಹೆಚ್ಚಿಗೆ ಪ್ರೋತ್ಸಾಹ ಧನ ಏರಿಕೆ ಇಲ್ಲ. ಶೀಘ್ರವೇ ಪ್ರೋತ್ಸಾಹ ಧನವನ್ನು DBT ಮುಖೇನ ನೇರವಾಗಿ ಹಾಲು ಉತ್ಪಾದಕರ ಆಧಾರ್ ಜೋಡಣೆಯಾಗಿರುವ ಬ್ಯಾಂಕ್ ಖಾತೆಗೆ ಪಾವತಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಪ್ರಭು ಚವ್ಹಾಣ ತಿಳಿಸಿದ್ದಾರೆ.
ಹಾಲು ಉತ್ಪಾದಕ ರೈತರಿಗೆ ನೀಡುತ್ತಿರುವ 5 ರೂಪಾಯಿ ಪ್ರೋತ್ಸಾಹ ಧನವನ್ನು ಏರಿಕೆ ಮಾಡುವ ಯಾವುದೇ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಶೀಘ್ರವೇ 339 ಕೋಟಿ ಬಾಕಿ ಪ್ರೋತ್ಸಾಹಧನ ನೇರವಾಗಿ ಬ್ಯಾಂಕ್ ಖಾತೆಗೆ ಪಾವತಿ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.